image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಅತ್ಯಾಚಾರ, ವಂಚನೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್‌ ವಶಕ್ಕೆ

ಅತ್ಯಾಚಾರ, ವಂಚನೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್‌ ವಶಕ್ಕೆ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿಯೊಂದಿಗೆ  ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ಪರಾರಿಯಾಗಿರುವ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ನನ್ನು ಪೊಲೀಸರು ಮೈಸೂರು ಸಮೀಪ ಟಿ ನರಸಿಪುರದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರ್ ಪ್ರಕಟನೆಯಲ್ಲಿ ತಿಳಿದಿದ್ದಾರೆ

ಹೈಸ್ಕೂಲ್ ಓದುವ ಸಂದರ್ಭ ಸಹಪಾಠಿಯಾಗಿದ್ದು, ಪ್ರಸ್ತುತ ಪದವಿ ವಿದ್ಯಾರ್ಥಿನಿಯಾಗಿರುವ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ ಆಕೆಯನ್ನು ತನ್ನ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭಕರೆಸಿ  ದೈಹಿಕ ಸಂಪರ್ಕ ಬೆಳೆಸಿದ್ದ. ಗರ್ಭವತಿಯಾಗಿದ್ದ ಯುವತಿ ಇತ್ತೀಚೆಗಷ್ಟೆ ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಮಧ್ಯೆ ತನ್ನನ್ನು ಮದುವೆಯಾಗುವುದಾಗಿ ನಂಬಿಸಿದ್ದ ಕೃಷ್ಣ ಜೆ.ರಾವ್ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವುದಾಗಿ ಆರೋಪಿಸಿ ಸಂತ್ರಸ್ತೆ ಆತನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Category
ಕರಾವಳಿ ತರಂಗಿಣಿ