image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಪ್ರಕರಣ: ದಟ್ಟ ಅರಣ್ಯದ ಮಧ್ಯೆ ನಡೆಯುತ್ತಿರುವ ಸ್ಥಳ ಪರಿಶೀಲನೆ

ಧರ್ಮಸ್ಥಳ ಪ್ರಕರಣ: ದಟ್ಟ ಅರಣ್ಯದ ಮಧ್ಯೆ ನಡೆಯುತ್ತಿರುವ ಸ್ಥಳ ಪರಿಶೀಲನೆ

ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸಮೀಪವಿರುವ  ಅರಣ್ಯದ ನಡುವೆ ಎಸ್.ಐ.ಟಿ ತಂಡದ ಅಧಿಕಾರಿಗಳು ಸಾಕ್ಷಿ ಬುರುಡೆ ದೂರುದಾರನನ್ನು ಕರೆದೊಯ್ದಿದ್ದು ಸ್ಥಳ ಪರಿಶೀಲನೆ ನಡೆಸಲಾಗುತ್ತಿದೆ.

ಮಧ್ಯಾಹ್ನದ ವೇಳೆ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಧರ್ಮಸ್ಥಳ ನ ನೇತ್ರಾವತಿ ಸ್ನಾನಘಟ್ಟಕ್ಕೆ ಸಾಕ್ಷಿ ದೂರುದಾರನನ್ನು ಕರೆತರಲಾಗಿದ್ದು, ಸ್ನಾನಘಟ್ಟದ ಸಮೀಪವೇ ಒಂದು ಸ್ಥಳವನ್ನು ಆತ ತೋರಿಸಿದ್ದು ಅದನ್ನು ಗುರುತಿಸಿದ ಬಳಿಕ ಇದೀಗ ದಟ್ಟ ಅರಣ್ಯದಲ್ಲಿ  ಪರಿಶೀಲನೆ ಕಾರ್ಯ ನಡೆಯುತ್ತಿದೆ.ಈ ಕಾಡಿನ ಒಳಗೆ ಆತ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಅನುಮಾನವಿದ್ದು, ಇಲ್ಲಿ ಅಧಿಕಾರಿಗಳು ಅದನ್ನು ಗುರುತಿಸುವ ಕಾರ್ಯ ಮಾಡುತ್ತಿದ್ದಾರೆ. ಇಲ್ಲಿನ ಸ್ಥಳ ಪರಿಶೀಲನೆ ಇನ್ನಷ್ಟು ಹೊತ್ತು ಮುಂದುವರಿಯುವ ನಿರೀಕ್ಷೆಯಿದೆ.

ಈತ ಇಂದು ನೀಡುವ ಮಾಹಿತಿ ಹಾಗೂ ಗುರುತಿಸುವ ಸ್ಥಳಗಳನ್ನು ಪೊಲೀಸರು ಮಾರ್ಕ್ ಮಾಡುತ್ತಿರುವುದಾಗಿ ಮಾಹಿತಿ ಲಭ್ಯವಾಗಿದ್ದು, ಆರಂಭದ ಹಂತದಲ್ಲಿ ಸ್ಥಳಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದ್ದು ಮುಂದಿನ ಹಂತದಲ್ಲಿ ಮೃತದೇಹಗಳನ್ನು ಹೊರತೆಗೆಯುವ ಕಾರ್ಯಕ್ಕೆ ಮುಂದಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Category
ಕರಾವಳಿ ತರಂಗಿಣಿ