image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕೇರಳ ಮೂಲದ ದೀಪಕ್​ ಸಾವು ಪ್ರಕರಣ : ಶಿಮ್ಜಿತಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ

ಕೇರಳ ಮೂಲದ ದೀಪಕ್​ ಸಾವು ಪ್ರಕರಣ : ಶಿಮ್ಜಿತಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ

ಕೊಚ್ಚಿ: ಕೇರಳ ಮೂಲದ ದೀಪಕ್​ ಸಾವು ಪ್ರಕರಣ ಇಡೀ ದೇಶದಲ್ಲಿ ಸಾಕಷ್ಟು ಸದ್ದು ಮಾಡಿದ್ದು ನಿಮಗೆಲ್ಲರಿಗೂ ಗೊತ್ತಿದೆ. ತಾನು ಮಾಡದ ತಪ್ಪಿಗೆ ಅಮಾಯಕ ದೀಪಕ್​ ಸಾವಿಗೆ ಶರಣಾದನು. ತನ್ನ ವೀವ್ಸ್​ ಹುಚ್ಚಿಗೆ ಮಾನವೀಯತೆಯನ್ನು ಮರೆತು ವರ್ತಿಸಿದ ಆರೋಪಿ ಶಿಮ್ಜಿತಾ ಮುಸ್ತಫಾ ವಿರುದ್ಧ ದೇಶಾದ್ಯಂತ ತೀವ್ರ ಟೀಕೆಗಳು ವ್ಯಕ್ತವಾಗಿತ್ತು. ಇದೀಗ ಶಿಮ್ಜಿತಾಗೆ ನ್ಯಾಯಾಲಯದಲ್ಲೂ ತೀವ್ರ ಹಿನ್ನಡೆ ಉಂಟಾಗಿದೆ. ಪ್ರಸ್ತುತ ನ್ಯಾಯಾಂಗದ ಬಂಧನದಲ್ಲಿರುವ ಆರೋಪಿ ಶಿಮ್ಜಿತಾ, ಇನ್ನಷ್ಟು ದಿನಗಳ ಕಾಲ ಜೈಲಿನ ಕೋಣೆಯಲ್ಲಿ ಕಾಲ ಕಳೆಯಬೇಕಾಗಿದೆ. ಏಕೆಂದರೆ, ಕುಂದಮಂಗಲಂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆಕೆಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ನ್ಯಾಯಾಲಯವು ಪ್ರಾಸಿಕ್ಯೂಷನ್ ವಾದಗಳನ್ನು ಎತ್ತಿಹಿಡಿದಿದೆ.

ಸದ್ಯ ಈ ಪ್ರಕರಣ, ತನಿಖೆಯ ಪ್ರಾಥಮಿಕ ಹಂತದಲ್ಲಿದೆ ಮತ್ತು ಈ ಪರಿಸ್ಥಿತಿಯಲ್ಲಿ ಜಾಮೀನು ನೀಡುವುದು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಪ್ರಾಸಿಕ್ಯೂಷನ್ ವಾದಿಸಿತು. ಬಸ್ ಸಿಬ್ಬಂದಿ ಮತ್ತು ಇತರ ಪ್ರಯಾಣಿಕರ ಹೇಳಿಕೆಗಳನ್ನು ದಾಖಲಿಸಬೇಕಾಗಿರುವುದರಿಂದ ಆರೋಪಿಗಳನ್ನು ಬಿಡುಗಡೆ ಮಾಡುವುದು ತನಿಖೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಪೊಲೀಸ್ ವರದಿಯಲ್ಲಿ ಸೂಚಿಸಲಾಗಿತ್ತು. ಇದನ್ನು ಪರಿಗಣಿಸಿದ ನ್ಯಾಯಾಲಯ ಜಾಮೀನು ತಿರಸ್ಕರಿಸಿದೆ.

ತನ್ನ ತಪ್ಪಿನಿಂದ ಓರ್ವ ಅಮಾಯಕನ ಜೀವ ಹೋಗಿದ್ದರು ಕೂಡ ಅದರ ಪಶ್ಚಾತಾಪವಿಲ್ಲದೇ ಶಿಮ್ಜಿತಾ ವರ್ತಿಸುತ್ತಿದ್ದಾಳೆ. ಮೃತ ದೀಪಕ್​ ವಿರುದ್ಧವೇ ಆಕೆ ದೂರು ನೀಡಿದ್ದಾಳೆ. ಘಟನೆ ನಡೆದ ದಿನ ಬೆಳಗ್ಗೆ ನಾನು ಪಯ್ಯನ್ನೂರು ರೈಲು ನಿಲ್ದಾಣದಿಂದ ಬಸ್ ಹತ್ತಿದೆ. ಪಯ್ಯನ್ನೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ, ಓರ್ವ ವ್ಯಕ್ತಿ ನನ್ನನ್ನು ಅನುಚಿತವಾಗಿ ಮುಟ್ಟಿದನು. ಇದಾದ ನಂತರ, ನಾನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ ಎಂದು ಶಿಮ್ಜಿತಾ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಆದರೆ, ದೂರಿನಲ್ಲಿ, ಆ ವ್ಯಕ್ತಿಯ ಗುರುತನ್ನು ಆಕೆ ಬಹಿರಂಗಪಡಿಸಿಲ್ಲ ಎಂದು ವರದಿಯಾಗಿದೆ.

Category
ಕರಾವಳಿ ತರಂಗಿಣಿ