image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಶ್ರೀಲಂಕಾ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಬಂಧನ

ಶ್ರೀಲಂಕಾ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಬಂಧನ

ಶ್ರೀಲಂಕಾ : ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರನ್ನು ಸರ್ಕಾರಿ ಹಣ ದುರುಪಯೋಗ ಮಾಡಿರುವ ಆರೋಪದ ಮೇಲೆ ಇಂದು ಬಂಧಿಸಲಾಗಿದೆ. ವಿಕ್ರಮಸಿಂಘೆ (76) ಅವರನ್ನು ಕ್ರಿಮಿನಲ್ ತನಿಖಾ ಇಲಾಖೆ (ಸಿಐಡಿ) ಪ್ರಧಾನ ಕಚೇರಿಯಲ್ಲಿ ಬಂಧಿಸಲಾಯಿತು. ಸರ್ಕಾರಿ ನಿಧಿ ದುರುಪಯೋಗ ಆರೋಪದ ತನಿಖೆಗೆ ಸಂಬಂಧಿಸಿದಂತೆ ಹೇಳಿಕೆ ದಾಖಲಿಸಲು ಅವರನ್ನು ಅಲ್ಲಿಗೆ ಕರೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸೆಪ್ಟೆಂಬರ್ 2023ರಲ್ಲಿ ಪತ್ನಿ ಪ್ರೊಫೆಸರ್ ಮೈತ್ರಿ ಅವರ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಇಂಗ್ಲೆಂಡ್‌ಗೆ ಪ್ರಯಾಣಿಸುವುದಕ್ಕಾಗಿ ರಾಜ್ಯದ ಹಣ ಬಳಸಿಕೊಂಡಿದ್ದಾರೆ ಎಂದು ಅವರ ಮೇಲೆ ಆರೋಪ ಹೊರಿಸಲಾಗಿದೆ. ಸಿಂಘೆ ಅಮೆರಿಕದಲ್ಲಿ ಅಧಿಕೃತ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಅಲ್ಲಿಂದ ಮರಳಿದ ಬಳಿಕ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಂಗ್ಲೆಂಡ್​ಗೆ ತೆರಳಿದ್ದರು. ತಮ್ಮ ಈ ಪ್ರವಾಸಕ್ಕೆ ಸರ್ಕಾರದ ಹಣವನ್ನು ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿದೇಶಿ ಪ್ರವಾಸ ಸರ್ಕಾರದ ಅಧಿಕೃತ ಕಾರ್ಯಕ್ರಮವಾಗಿರಲಿಲ್ಲ. ಆದರೂ ಸರ್ಕಾರಿ ಖಜಾನೆಯಿಂದ ಹಣಕಾಸು ಒದಗಿಸಲಾಗಿತ್ತು ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ. ಗೊಟಬಯ ರಾಜಪಕ್ಸೆ ಅವರನ್ನು ಪದಚ್ಯುತಗೊಳಿಸಿದ ನಂತರ ಜುಲೈ 2022ರಲ್ಲಿ ಶ್ರೀಲಂಕಾದ ಮಧ್ಯಂತರ ಅಧ್ಯಕ್ಷರಾಗಿ ರನಿಲ್ ವಿಕ್ರಮಸಿಂಘೆ ಅಧಿಕಾರ ವಹಿಸಿಕೊಂಡರು. ವಿಕ್ರಮಸಿಂಘೆ ಅವರು 2022ರ ಆರ್ಥಿಕ ಬಿಕ್ಕಟ್ಟಿನಿಂದ ಶ್ರೀಲಂಕಾವನ್ನು ಪಾರು ಮಾಡಿದ ಕೀರ್ತಿಗೆ ಪಾತ್ರರಾದರು. ಸೆಪ್ಟೆಂಬರ್ 2024ರಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಅವರು ರಾಷ್ಟ್ರೀಯ ಜನತಾ ಶಕ್ತಿಯ ನಾಯಕ ಅನುರ ಕುಮಾರ ದಿಸಾನಾಯಕೆ ವಿರುದ್ಧ ಸೋತರು. ಈ ಅನುಭವಿ ರಾಜಕಾರಣಿ ಶ್ರೀಲಂಕಾದ ಪ್ರಧಾನಿಯಾಗಿ ಆರು ಬಾರಿ ಕಾರ್ಯ ನಿರ್ವಹಿಸಿದ್ದಾರೆ. ಶ್ರೀಲಂಕಾ, ಅಲ್ಜೀರಿಯಾ, ಇರಾಕ್, ಲಿಬಿಯಾ, ಫಿಲಿಪ್ಪಿನ್ಸ್​, ಮೊಲ್ಡೊವಾ ಮತ್ತು ಬ್ರೂನಿ ಹೀಗೆ ಏಳು ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಜುಲೈ 10, 2025 ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ಸುತ್ತಿನ ಸುಂಕ ಘೋಷಿಸಿದ್ದರು. ಇವುಗಳು ಆಗಸ್ಟ್ 1ರಿಂದ ಜಾರಿಗೆ ಬರಲಿವೆ ಎಂದು ಅಧ್ಯಕ್ಷ ಟ್ರಂಪ್ ಪ್ರಕಟಿಸಿದ್ದರು. ಈ ರಾಷ್ಟ್ರಗಳಿಗೆ ಬರೆದಿರುವ ಪತ್ರಗಳ ಪ್ರಕಾರ, ಶ್ರೀಲಂಕಾ, ಇರಾಕ್, ಅಲ್ಜೀರಿಯಾ ಮತ್ತು ಲಿಬಿಯಾದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಅಮೆರಿಕ ಶೇ 30ರಷ್ಟು ಸುಂಕ ವಿಧಿಸುವುದಾಗಿ ತಿಳಿಸಿತ್ತು. ಅಮೆರಿಕಕ್ಕೆ ಸರಕುಗಳನ್ನು ರಫ್ತು ಮಾಡುವಾಗ ಮೊಲ್ಡೊವಾ ಶೇ 25ರಷ್ಟು ಸುಂಕವನ್ನು ಎದುರಿಸಬೇಕಾಗುತ್ತದೆ ಎಂದು ಟ್ರಂಪ್ ತಾವು ಬರೆದ ಪತ್ರಗಳಲ್ಲಿ ಉಲ್ಲೇಖಿಸಿದ್ದರು.

Category
ಕರಾವಳಿ ತರಂಗಿಣಿ