image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಪರಿಶಿಷ್ಟ ಜಾತಿ ಒಳಮೀಸಲಾತಿ ಅಳವಡಿಸಿಕೊಂಡು ಹೊಸದಾಗಿ ನೇಮಕಾತಿಗೆ ಸರಕಾರದಿಂದ ಅಧಿಸೂಚನೆ

ಪರಿಶಿಷ್ಟ ಜಾತಿ ಒಳಮೀಸಲಾತಿ ಅಳವಡಿಸಿಕೊಂಡು ಹೊಸದಾಗಿ ನೇಮಕಾತಿಗೆ ಸರಕಾರದಿಂದ ಅಧಿಸೂಚನೆ

ಬೆಂಗಳೂರು : ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ದಿನಾಂಕ: 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ಮಂಡಳಿ/ನಿಗಮ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಹೊರಡಿಸಿದ ಅಧಿಸೂಚನೆಗಳನ್ನು ರದ್ದುಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಪರಿಶಿಷ್ಟ ಜಾತಿ ಒಳಮೀಸಲಾತಿಯನ್ನು ಅಳವಡಿಸಿಕೊಂಡು ಕಾಲಬದ್ಧವಾಗಿ ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸುವಂತೆ ಸೂಚಿಸಲಾಗಿದೆ. 

ಇದಕ್ಕೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ. ದಿನಾಂಕ: 28.10.2024ರ ಹಿಂದೆ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ದಿನಾಂಕ: 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ಮಂಡಳಿ/ನಿಗಮ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಯಾವುದಾದರೂ ತಿದ್ದುಪಡಿ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಅಂತಹ ಎಲ್ಲಾ ಅಂತಹ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನೂ ಸಹ ರದ್ದುಗೊಳಿಸಿ, ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕೆಂದೂ ಸಹ ಹಾಗು ಕಾಲಬದ್ದವಾಗಿ (Time Bound) ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಆಯ್ಕೆ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿಗಳು ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ