image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಬಿಹಾರ ಸಚಿವ ನಿತಿನ್ ನಬಿನ್ ಅವರನ್ನು ತನ್ನ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿದ ಬಿ. ಜೆ. ಪಿ

ಬಿಹಾರ ಸಚಿವ ನಿತಿನ್ ನಬಿನ್ ಅವರನ್ನು ತನ್ನ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿದ ಬಿ. ಜೆ. ಪಿ

ನವದೆಹಲಿ: ಭಾರತೀಯ ಜನತಾ ಪಕ್ಷವು ಬಿಹಾರ ಸಚಿವ ನಿತಿನ್ ನಬಿನ್ ಅವರನ್ನು ತನ್ನ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿದ್ದುದೆ. ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವಧಿ ಪೂರ್ಣಗೊಂಡಿದ್ದು, ಹೊಸ ಸಾರಥಿ ಬಿಹಾರ ಸಚಿವ ನಿತಿನ್ ನಬಿನ್ ಆಯ್ಕೆಯಾಗಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರದಲ್ಲಿ ಪ್ರಸ್ತುತ ರಸ್ತೆ ನಿರ್ಮಾಣ ಖಾತೆಯನ್ನು ಹೊಂದಿರುವ ನಬಿನ್ ಅವರನ್ನು ಪಕ್ಷದ ಸಂಸದೀಯ ಮಂಡಳಿಯ ಅನುಮೋದನೆಯ ನಂತರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೊರಡಿಸಿದ ಆದೇಶದ ಮೂಲಕ ಈ ಹುದ್ದೆಗೆ ಹೆಸರಿಸಲಾಗಿದೆ. ಜನವರಿ 2024 ರಲ್ಲಿ, ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಕೇಂದ್ರ ಆರೋಗ್ಯ ಸಚಿವರೂ ಆಗಿರುವ ನಡ್ಡಾ ಅವರಿಗೆ ಸಾರ್ವತ್ರಿಕ ಚುನಾವಣೆಗಳು ಮುಗಿಯುವವರೆಗೆ ವಿಸ್ತರಣೆ ನೀಡಲು ನಿರ್ಧರಿಸಲಾಯಿತು. ಪಕ್ಷದ ಸಂವಿಧಾನದ ಪ್ರಕಾರ, ಅಧ್ಯಕ್ಷರ ಅವಧಿ ತಲಾ 3 ವರ್ಷಗಳಾಗಿದ್ದು, ಸತತ ಎರಡು ಅವಧಿಗಳಿಗೆ ಇರಬಹುದಾಗಿದೆ. ರಾಷ್ಟ್ರೀಯ ಮಂಡಳಿ ಮತ್ತು ರಾಜ್ಯ ಮಂಡಳಿಗಳ ಸದಸ್ಯರು ಅಧ್ಯಕ್ಷರನ್ನು ಆಯ್ಕೆ ಮಾಡುತ್ತಾರೆ.

ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆಯು ಕನಿಷ್ಠ 50% ರಾಜ್ಯಗಳಲ್ಲಿ ಮಂಡಲ, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಸದಸ್ಯತ್ವ ಅಭಿಯಾನ ಮತ್ತು ಸಾಂಸ್ಥಿಕ ಚುನಾವಣೆಯೊಂದಿಗೆ ಪ್ರಾರಂಭವಾಗುತ್ತದೆ. ನಂತರ ಉಮೇದುವಾರಿಕೆಗೆ ಪ್ರಸ್ತಾವನೆಯನ್ನು ರಾಜ್ಯಗಳು ಮತ್ತು ಸಂಸದೀಯ ಪಕ್ಷವು ಮಾಡುತ್ತದೆ. ಬಿಹಾರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿರುವ ನಬಿನ್ ಅವರ ನೇಮಕ ತಕ್ಷಣವೇ ಜಾರಿಗೆ ಬಂದಿದೆ ಎಂದು ಪಕ್ಷ ತಿಳಿಸಿದೆ. ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನೇಮಕವಾಗಿರುವ ನಬಿನ್ ಅವರಿಗೆ ಪಕ್ಷದ ಕೇಂದ್ರ ನಾಯಕತ್ವ ಮತ್ತು ಅದರ ರಾಜ್ಯ ಘಟಕಗಳ ನಡುವೆ ಸಮನ್ವಯ ಸಾಧಿಸುವುದು, ಸಾಂಸ್ಥಿಕ ವ್ಯವಹಾರಗಳ ಮೇಲ್ವಿಚಾರಣೆ ಹಾಗೂ ದೇಶಾದ್ಯಂತ ಬಿಜೆಪಿಯ ರಾಜಕೀಯ ಮತ್ತು ಚುನಾವಣಾ ಕಾರ್ಯತಂತ್ರಗಳನ್ನು ಜಾರಿಗೆ ತರಲು ಸಹಾಯ ಮಾಡುವ ಜವಾಬ್ದಾರಿಗಳನ್ನ ನೀಡಲಾಗಿದೆ. ನಿತಿನ್ ನಬಿನ್ ಕುಟುಂಬ ರಾಜಕೀಯ ಹಿನ್ನೆಲೆ ಹೊಂದಿದೆ. ನಿತಿನ್ ನಬಿನ್ ತಂದೆ ನಬಿನ್ ಕಿಶೋರ್ ಪ್ರಸಾದ್ ಸಿನ್ಹ ಬಿಜೆಪಿಯ ಹಿರಿಯ ನಾಯಕರಾಗಿದ್ದರು. ಶಾಸಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ತಂದೆ ನಿಧನದ ಬಳಿಕ ಬಿಜೆಪಿಯಲ್ಲಿ ನಿತಿನ್ ನಬಿನ್ ಸಕ್ರಿಯರಾದರು. ಹಂತ ಹಂತವಾಗಿ ಬಿಜೆಪಿಯಲ್ಲಿ ಉನ್ನತ ಸ್ಥಾನಕ್ಕೇರಿದ್ದಾರೆ. ಕಾರ್ಯಕರ್ತನಾಗಿ, ಮುಖಂಡನಾಗಿ, ಶಾಸಕನಾಗಿ ಬಳಿಕ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ನಿತಿಶ್ ಕುಮಾರ್ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Category
ಕರಾವಳಿ ತರಂಗಿಣಿ