image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಜ.13-15ರವರೆಗೆ ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ

ಜ.13-15ರವರೆಗೆ ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ಜ.13-15ರವರೆಗೆ ತಮಿಳುನಾಡಿನ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿನ ರೈತರೊಂದಿಗೆ ಪೊಂಗಲ್‌ ಹಬ್ಬವನ್ನು ಆಚರಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ತಮಿಳುನಾಡು ಭೇಟಿ ವೇಳೆ ಅವರು ರಾಮೇಶ್ವರದಲ್ಲಿ ನಡೆಯಲಿರುವ ಕಾಶಿ ತಮಿಳ್‌ ಸಂಗಮಂ 4.0 ಸಮಾರೋಪದಲ್ಲಿ ಹಾಗೂ ಇತರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ರೈತರ ಜತೆ ಪೊಂಗಲ್‌ ಆಚರಿಸಲಿದ್ದಾರೆ ಎಂದು ವರದಿಗಿದೆ. 2026ರಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ತಮಿಳುನಾಡಿನಲ್ಲಿ ಪ್ರಧಾನಿ ಭೇಟಿಯು ಬಹುಮುಖ್ಯ ಪಾತ್ರ ವಹಿಸಲಿದೆ. ಭೇಟಿ ವೇಳೆ ಅವರು ಹಲವು ರಾಜ್ಯ ನಾಯಕರೊಂದಿಗೆ ಬಿಜೆಪಿ ಜತೆ ಮೈತ್ರಿ ಕುರಿತು ಚರ್ಚೆ ನಡೆಸಬಹುದು . ತಮಿಳುನಾಡಿನ ಗ್ರಾಮೀಣ ಮತ್ತು ರೈತಾಪಿ ವರ್ಗದ ಮತ ಸೆಳೆಯಲೂ ಮುಂದಾಗಲಿದ್ದಾರೆ ಎಂದು ಮೂಲಗಳು ಹೇಳಿವೆ.

Category
ಕರಾವಳಿ ತರಂಗಿಣಿ