ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದೇನೆ ಎಂದು ಆರೋಪಿಸಿರುವ ಅನಾಮಧೇಯ ಬುರುಡೆ ದೂರುದಾರ ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾನೆ. ತನಿಖಾಧಿಕಾರಿಗಳಾದ ಎಂ.ಎನ್.ಅನುಚೇತ್ ಹಾಗೂ ಜಿತೇಂದ್ರ ಕುಮಾರ್ ದಯಾಮ ಅವರುಗಳು ದೂರುದಾರನನ್ನು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಐಬಿಯಲ್ಲಿ ಎಸ್ಐಟಿ ಕಚೇರಿ ತೆರೆಯಲಾಗಿದ್ದು, ಅನಾಮಧೇಯ ಬುರುಡೆ ದೂರುದಾರನನ್ನು ಮುಸುಕು ಹಾಕಿ ಕರೆ ತರಲಾಗಿದೆ. ಬಾಡಿಗೆ ಕಾರಿನಲ್ಲಿ ಇಬ್ಬರು ವಕೀಲರೊಂದಿಗೆ ಎಸ್ಐಟಿ ಕಚೇರಿಗೆ ಆತ ಆಗಮಿಸಿದ್ದಾನೆ.
ಬಳಿಕ ತನಿಖಾಧಿಕಾರಿಗಳ ಮುಂದೆ ಆತನನ್ನು ಹಾಜರುಪಡಿಸಲಾಯಿತು. ತನಿಖಾಧಿಕಾರಿಗಳು ಮುಸುಕು ಸರಿಸಿ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಆತನ ಹೇಳಿಕೆಗಳನ್ನು ವೀಡಿಯೋ ದಾಖಲೆ ಮಾಡುವ ಸಾಧ್ಯತೆಯಿದ್ದು, ಇಂದು ಆತನಲ್ಲಿ ಎಸ್ಐಟಿ ಅಧಿಕಾರಿಗಳ ಮಹತ್ವದ ಹೇಳಿಕೆಗಳನ್ನು ದಾಖಲಿಸಲಿದ್ದಾರೆ.