ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದೆ.