image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಆರೆಸ್ಸೆಸ್, ಬಿಜೆಪಿ ನಾಯಕರು ತಮ್ಮ ಮಕ್ಕಳನ್ನು ಯಾಕೆ ಪೆನ್ನು ಕೊಟ್ಟು ವಿದೇಶದಲ್ಲಿ ಓದಿಸುತ್ತಾರೆ-ಶಾಸಕ ಮಂಜುನಾಥ ಭಂಡಾರಿ ಪ್ರಶ್ನೆ

ಆರೆಸ್ಸೆಸ್, ಬಿಜೆಪಿ ನಾಯಕರು ತಮ್ಮ ಮಕ್ಕಳನ್ನು ಯಾಕೆ ಪೆನ್ನು ಕೊಟ್ಟು ವಿದೇಶದಲ್ಲಿ ಓದಿಸುತ್ತಾರೆ-ಶಾಸಕ ಮಂಜುನಾಥ ಭಂಡಾರಿ ಪ್ರಶ್ನೆ

ಮಂಗಳೂರು: ಆರೆಸ್ಸೆಸ್ ಹಿಂದುಳಿದ ವರ್ಗದ ಮಕ್ಕಳನ್ನು ಲಾಠಿ, ಗನ್ನು ಕೊಟ್ಟು ತರಬೇತಿ ಕೊಡ್ತಾ ಇದ್ದಾರೆ. ತಮ್ಮ ಮಕ್ಕಳಿಗೆ ಪೆನ್ನು ಕೊಟ್ಟು ವಿದೇಶದಲ್ಲಿ ಓದಿಸುತ್ತಿದ್ದಾರೆ. ಸರಕಾರ ಹೇಳಿದ್ದು ಆರೆಸ್ಸೆಸ್ ಸಹಿತ ಖಾಸಗಿ ಸಂಘಟನೆಗಳಿಗೆ ಸರಕಾರಿ ಮೈದಾನ, ರಸ್ತೆ, ಶಾಲೆಗಳಲ್ಲಿ ಕಾರ್ಯ ಚಟುವಟಿಕೆ ನಡೆಸಲು ಅನುಮತಿ ಬೇಕು ಎಂದು ಅಷ್ಟೇ. ನಿಮಗೆ ಅನುಮತಿ ಪಡೆಯಲು ಏನು ಸಮಸ್ಯೆಯಿದೆ? ಆರೆಸ್ಸೆಸ್ ಸಂಘಟನೆಗೆ 100 ವರ್ಷಗಳು ಆಯ್ತು ಅಂತ ದೇಶಾದ್ಯಂತ ಪಥ ಸಂಚಲನ ನಡೆಸ್ತೀರಿ, ಇಷ್ಟು ವರ್ಷಗಳಲ್ಲಿ ಯಾಕೆ ಸಂಘಟನೆಯನ್ನು ನೋಂದಣಿ ಮಾಡಿಸಿಕೊಂಡಿಲ್ಲ? ನೋಂದಣಿ ಮಾಡಿಸಿಕೊಳ್ಳದ ಸಂಘಟನೆಗೆ ಎಲ್ಲಿಂದ ಹಣ ಬರುತ್ತದೆ? ಖಾತೆಯಲ್ಲಿ ಎಷ್ಟು ಹಣ ಇದೆ? ಇದರ ತರಬೇತಿ ಯಾವ ರೀತಿ ನಡೆಯುತ್ತೆ? ಅಂತ ಸಂವಿಧಾನದಲ್ಲಿ ಯಾಕೆ ಕೇಳಬಾರದು?“ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಪ್ರಶ್ನಿಸಿದರು.  ನಗರದ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ”ಆರೆಸ್ಸೆಸ್ ಒಂದು ಸಂಘಟನೆಯೇ ಅಲ್ಲ ಅದೊಂದು ಸಂಘಟನೆ ಆಗಿದ್ದರೆ ಅದಕ್ಕೆ ಕೆಲವೊಂದು ಮಾನದಂಡಗಳಿವೆ. ಮುಖ್ಯವಾಗಿ ನೋಂದಣಿ ಮಾಡಿರಬೇಕು. ಅದ್ಯಾವುದೂ ಇಲ್ಲದ ಆರೆಸ್ಸೆಸ್ ಮತ್ತು ಇತರ ಖಾಸಗಿ ಸಂಘಟನೆಗಳಿಗೆ ಸಾರ್ವಜನಿಕ ಕಾರ್ಯಕ್ರಮ ನಡೆಸಲು ಸರಕಾರ ನಿಷೇಧ ಹೇರಿದೆ. ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರ ಈ ನಿರ್ಧಾರ ಸರಿಯಾಗಿಯೇ ಇದೆ. ಅದನ್ನು ನಾನು ಸಹಿತ ಜಿಲ್ಲೆಯ ಎಲ್ಲ ಕಾಂಗ್ರೆಸ್ ನಾಯಕರು ಒಪ್ಪಿಕೊಳ್ಳುತ್ತೇವೆ“ ಎಂದರು.  

“ಬಿಜೆಪಿಯವರಿಗೆ ಒಂದು ಪಾಕಿಸ್ತಾನ ಇನ್ನೊಂದು ಮುಸ್ಲಿಂ ಇವೆರಡು ಬಿಟ್ರೆ ಏನೂ ಗೊತ್ತಿಲ್ಲ. ಬಿಜೆಪಿ 10 ವರ್ಷಗಳಲ್ಲಿ ನಡೆಸಿರುವ ಆಡಳಿತದಲ್ಲಿ ಯಾವುದನ್ನು ಹಿಡ್ಕೊಂಡು ಮತ ಕೇಳಿದ್ರಿ? ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್ ಬಗ್ಗೆ ಮಾತಾಡಿದ್ರೆ ದೇಶದ್ರೋಹಿ ಪಟ್ಟ ಕಟ್ಟುತ್ತೀರಿ. ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದರಲ್ಲಿ ಏನು ತಪ್ಪಿದೆ.

”ವಿದ್ಯಾರ್ಥಿ ಜೀವನದಿಂದಲೇ ನಾನು ಆರೆಸ್ಸೆಸ್ ಬಿಜೆಪಿ ವಿರುದ್ಧ ಹೋರಾಟ ಮಾಡಿದವನು. ಯಡಿಯೂರಪ್ಪ ವಿರುದ್ಧ ಮಾತಾಡಿ ಎದುರು ಹಾಕಿಕೊಂಡವನು ನಾನು. ನಾವು ಕರಾವಳಿ ಕಾಂಗ್ರೆಸಿಗರು ಪ್ರತಿಯೊಬ್ಬರೂ ಪ್ರಿಯಾಂಕ ಖರ್ಗೆ ಅವರ ಜೊತೆಗಿದ್ದೇವೆ. ಇಲ್ಲಿ ಆರೆಸ್ಸೆಸ್ ಬ್ಯಾನ್ ಆಗಿದೆ ಎಂದು ಬೊಬ್ಬೆ ಹೊಡೆಯುವವರು ಜನಸಾಮಾನ್ಯರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಇಲ್ಲಿ ಆರೆಸ್ಸೆಸ್ ಮಾತ್ರವಲ್ಲ ಯಾವುದೇ ಖಾಸಗಿ ಸಂಘಟನೆಗಳಿಗೆ ಸರಕಾರಿ ಜಾಗ ಬಳಸುವುದಕ್ಕೆ ಅನುಮತಿ ಪಡೆಯಲೇಬೇಕಾಗಿದೆ. ಮಡಿಕೇರಿಯಲ್ಲಿ ಮಕ್ಕಳಿಗೆ ಗನ್ ತರಬೇತಿ ಕೊಟ್ಟಿದ್ದು ನಾವೆಲ್ಲರೂ ನೋಡಿದ್ದೇವೆ. 

“ದಿನೇಶ್ ಅಮೀನ್ ಮಟ್ಟು ಆರೋಪ ಮಾಡಿರುವಂತೆ ನಮ್ಮ ಕಾಲೇಜಿನಲ್ಲಿ ಆರೆಸ್ಸೆಸ್ ನ ಯಾವುದೇ ರೀತಿಯ ಕಾರ್ಯಕ್ರಮ ಇಲ್ಲಿನವರೆಗೆ ನಡೆದಿಲ್ಲ. ಸೃಷ್ಟಿ ಅಂತ ಒಂದು ಪ್ರಾಜೆಕ್ಟ್ ಕಾರ್ಯಕ್ರಮ ನಡೆದಿತ್ತು ಅದು ರಾಜ್ಯದ ಎಲ್ಲ ಇಂಜಿನಿಯರಿಂಗ್ ಕಾಲೇಜುಗಳ ಒಟ್ಟು ಸೇರುವಿಕೆಯಲ್ಲಿ ನಡೆದಿದ್ದ ವಿಜ್ಞಾನ ಮಾಡೆಲ್ ಕಾರ್ಯಕ್ರಮ. ಅದರಲ್ಲಿ ಎಬಿವಿಪಿ ಕೂಡಾ ಪಾಲು ಪಡೆದಿತ್ತು. ಅಂದಿನ ಮುಖ್ಯಮಂತ್ರಿ ಸದಾನಂದ ಗೌಡ ಅದರಲ್ಲಿ ಪಾಲ್ಗೊಂಡ ಕಾರಣ ನಾನು ಭಾಗವಹಿಸಿದ್ದೆ. ಎಬಿವಿಪಿ ಸಮ್ಮೇಳನ, ಬೈಠಕ್ ನಡೆದಿದೆ ಎನ್ನುವವರು ಅದಕ್ಕೆ ಆಧಾರ ತೋರಿಸಲಿ. ಹೀಗೆ ಹೇಳುವವರು ಯಾವ ನೈತಿಕ ಆಧಾರದಲ್ಲಿ ಕಾಂಗ್ರೆಸ್ ಟಿಕೆಟ್ ಕೇಳಿದರು? ಇಂದಿರಾಗಾಂಧಿ ಬಗ್ಗೆ ಬರೆದರು, ರಾಜೀವ್ ಗಾಂಧಿ ಬಗ್ಗೆ ಬರೆದರು ಆದರೂ ಸಿದ್ಧಾಂತ ಗೊತ್ತಿಲ್ಲದೇ ಎಂಎಲ್ ಸಿ ಟಿಕೆಟ್ ಕೊಡಿ ಅಂತ ಕೇಳಿದರು?  ಮುಂದೆ ಇಂತಹ ಆರೋಪ ಮಾಡಿದರೆ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ“ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಆರ್ ಪದ್ಮರಾಜ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮಹಿಳಾ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ, ವಿಕಾಸ್ ಶೆಟ್ಟಿ, ನೀರಜ್ ಪಾಲ್, ಸುಬೋದಯ ಆಳ್ವಾ,  ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ