ಚಿಕ್ಕಮಗಳೂರು: ಜಿಲ್ಲೆಗೆ ವಿ.ಎಚ್.ಪಿ ಮುಖಂಡ ಶರಣ್ ಪಂಪ್ ವೆಲ್ ಗೆ ನಿರ್ಬಂಧ ವಿಧಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಶರಣ್ ಪಂಪ್ ವೆಲ್ ಗೆ ನಿರ್ಬಂಧ ವಿಧಿಸಿರುವ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಕಾರ್ಯಕರ್ತರು ಆಗಮಿಸುತ್ತಿದ್ದು ಇದರ ಬೆನ್ನಲ್ಲೇ ಜಿಲ್ಲಾಧಿಕಾರಿ ಕಚೇರಿ ಸುತ್ತ ಇನ್ನೂರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು ಜೊತೆಗೆ ಜಿಲ್ಲಾಧಿಕಾರಿ ಮಾರ್ಗವನ್ನು ಬ್ಯಾರಿಕೇಡ್ ಇಟ್ಟು ಬಂದ್ ಮಾಡಿ ಕಾರ್ಯಕರ್ತರನ್ನು ತಡೆ ಹಿಡಿಯಲಾಗಿದೆ. ಇನ್ನು ಮನವಿ ಕೊಡಲು ಬಂದವರನ್ನು ಅರ್ಧ ದಾರಿಯಲ್ಲೇ ತಡೆದಿರುವುದನ್ನು ಖಂಡಿಸಿ ಜಿಲ್ಲಾಡಳಿತದ ವಿರುದ್ಧ ಭಜರಂಗದಳ, ವಿ.ಎಚ್.ಪಿ. ಕಾರ್ಯಕರ್ತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.