image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಎಐಸಿಸಿ ಒಬಿಸಿ ಸಲಹಾ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿಗೆ ನ್ಯಾಯ ಯೋಧ ಬಿರುದು ನೀಡುವ ಜೊತೆಗೆ ಮೂರು ನಿರ್ಣಯಗಳ ಘೋಷಣೆ

ಎಐಸಿಸಿ ಒಬಿಸಿ ಸಲಹಾ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿಗೆ ನ್ಯಾಯ ಯೋಧ ಬಿರುದು ನೀಡುವ ಜೊತೆಗೆ ಮೂರು ನಿರ್ಣಯಗಳ ಘೋಷಣೆ

ಬೆಂಗಳೂರು: ಎಐಸಿಸಿ ಒಬಿಸಿ ಸಲಹಾ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿಗೆ ನ್ಯಾಯ ಯೋಧ ಬಿರುದು ನೀಡುವ ಜೊತೆಗೆ ಮೂರು ನಿರ್ಣಯಗಳ ಬೆಂಗಳೂರು ಘೋಷಣೆ ಕೈಗೊಳ್ಳಲಾಗಿದೆ. ಸೋಮವಾರ ಮತ್ತು ಮಂಗಳವಾರ ಬೆಂಗಳೂರಲ್ಲಿ ನಡೆದ ಎಐಸಿಸಿ ಒಬಿಸಿ ಸಲಹಾ ಸಮಿತಿ ಸಭೆಯಲ್ಲಿ ಮೂರು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಈ ಸಂಬಂಧ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಭಾರತೀಯ ಗಣತಿ ಆಯೋಗದ ಮೂಲಕ ರಾಷ್ಟ್ರೀಯ ಮಟ್ಟದ ಜಾತಿ ಗಣತಿ ಮಾಡಿಸುವ ಬಗ್ಗೆ ಸಭೆಯಲ್ಲಿ ನಿರ್ಣಯಿಸಲಾಗಿದೆ. ಈ ಜಾತಿ ಗಣತಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ, ರಾಜಕೀಯ ವಿಚಾರಗಳನ್ನು ಪರಿಗಣಿಸಬೇಕು. ತೆಲಂಗಾಣ ರಾಜ್ಯದ ಜಾತಿ ಗಣತಿ ಮಾದರಿಯಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಲಾಗಿದೆ ಎಂದರು.

ಜೊತೆಗೆ ಸುಪ್ರಿಂ ಕೋರ್ಟ್ ಒಟ್ಟು 50% ಮೀಸಲಾತಿ ಮಿತಿ ಹಾಕಿದ್ದು, ಅದನ್ನು ತೆಗೆದು ಹಾಕಿ 75% ಮೀಸಲಾತಿ ಕಲ್ಪಿಸಲು ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯಿಸಲಾಗಿದೆ. ಇನ್ನು ಖಾಸಗಿ ಶೈಕ್ಷಣಿಕ ಸಂಸ್ಥೆಗಳಲ್ಲೂ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸುವಂತೆ ನಿರ್ಣಯ ಕೈಗೊಳ್ಳಲಾಗಿದೆ. ಜುಲೈ 25ರಂದು ದೆಹಲಿಯಲ್ಲಿ ನಡೆಸಲು ಉದ್ದೇಶಿಸಿರುವ ಕಾಂಗ್ರೆಸ್ ಒಬಿಸಿ ನಾಯಕತ್ವ ಭಾಗೀಧಾರಿ ಸಮ್ಮೇಳನವನ್ನು ಯಶಸ್ವಿಯಾಗಿ ನೆರವೇರಿಸಲು ನಿರ್ಣಯ ಕೈಗೊಳ್ಳಲಾಗಿದೆ. ಈ ಸಮಾವೇಶವನ್ನು ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ಎಐಸಿಸಿ ಒಬಿಸಿ ಸಲಹಾ ಸಮಿತಿ ರಾಜ್ಯದಲ್ಲಿ ಮೊದಲ‌ ಬಾರಿಗೆ ಸಭೆ ನಡೆಸಿದೆ. ನಿನ್ನೆ ಮತ್ತು ಇಂದು ಸಭೆ ನಡೆಸಲಾಗಿದೆ. ಸಲಹಾ ಸಮಿತಿ ಸದಸ್ಯರುಗಳು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಬೆಂಗಳೂರು ಘೋಷಣೆಯ ನಿರ್ಣಯಗಳನ್ನು ಸಭೆ ಸರ್ವಾನುಮತದಿಂದ ಅಂಗೀಕಾರ ಮಾಡಿತು. ಎಲ್ಲರೂ ಕೈ ಎತ್ತುವ ಮೂಲಕ ನಿರ್ಣಯ ಬೆಂಬಲಿಸಿದರು. ಒಬಿಸಿ ಸಲಹಾ ಸಮಿತಿ ಸಭೆಯಲ್ಲಿ ನ್ಯಾಯ ಯೋಧ ರಾಹುಲ್ ಗಾಂಧಿಗೆ ಅಭಿನಂದನೆ ಸಲ್ಲಿಸಲಾಯಿತು ಎಂದರು.

ಸಮಾಜದ ಕಡ್ಟಕಡೆಯ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಧೈರ್ಯದಿಂದ ಹೋರಾಡಿದ ಮತ್ತು ವಿಶೇಷವಾಗಿ ಹಿಂದುಳಿದ ವರ್ಗಗಳ ಪರ ಬೆನ್ನಿಗೆ ನಿಂತಿರುವ ರಾಹುಲ್ ಗಾಂಧಿಗೆ 'ನ್ಯಾಯ ಯೋಧ' ಎಂಬ ಬಿರುದನ್ನು ಸಭೆಯಲ್ಲಿ ನೀಡಲಾಯಿತು. ರಾಹುಲ್ ಗಾಂಧಿಯ ದೃಢಸಂಕಲ್ಪ ಮನುವಾದಿ ಮೋದಿ ಸರ್ಕಾರವು ದೇಶದಲ್ಲಿ ಜಾತಿ ಜನಗಣತಿ ಮಾಡುವಂತೆ ಮಾಡಿತು. ಈ ಐತಿಹಾಸಿಕ ಸಾಧನೆಗೆ ರಾಹುಲ್ ಗಾಂಧಿ ಅವರಿಗೆ ಭಾರತದ ಎಲ್ಲ ಹಿಂದುಳಿದ ವರ್ಗಗಳ ಪರವಾಗಿ ಸಮಿತಿಯು ಮೆಚ್ಚುಗೆ ಮತ್ತು ಕೃತಜ್ಞತೆ ವ್ಯಕ್ತಪಡಿಸಿದೆ ಎಂದು ಸಿದ್ದರಾಮಯ್ಯ ಹೇಳಿದರು.

Category
ಕರಾವಳಿ ತರಂಗಿಣಿ