ಬೆಂಗಳೂರು: ಆಸ್ತಿ ನೋಂದಣಿಗೆ ಜನರಲ್ ಪವರ್ ಆಟಾರ್ನಿ(GPA) ಕಡ್ಡಾಯಗೊಳಿಸುವ ನೋಂದಣಿ ಕರ್ನಾಟಕ(ತಿದ್ದುಪಡಿ) ಅಧಿನಿಯಮ 2025 ಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಸೋಮವಾರ ಅಧಿಕೃತ ರಾಜ್ಯ ಪತ್ರ ಹೊರಡಿಸಿದ್ದು, ರಾಜ್ಯ ಪತ್ರ ಹೊರಡಿಸಿದ ದಿನದಿಂದಲೇ ಈ ಮಸೂದೆ ಜಾರಿಗೆ ಬರಲಿದೆ. ನೋಂದಣಿ ಅಧಿನಿಯಮ 19008(1908ರ ಕೇಂದ್ರ ಅಧಿನಿಯಮ 16) ಅನ್ನು ಮತ್ತಷ್ಟು ತಿದ್ದುಪಡಿ ಮಾಡಿ ಕೆಲವು ಬದಲಾವಣೆ ಒಳಗೊಂಡ ಮಸೂದೆ ಇದಾಗಿದೆ. ಆಸ್ತಿ ನೋಂದಣಿಯನ್ನು ಸಂಪೂರ್ಣ ಡಿಜಟಲೀಕರಿಸುವ, ಪಾರದರ್ಶಕತೆ ಹೆಚ್ಚಿಸುವ ಬಗ್ಗೆ ಈ ತಿದ್ದುಪಡಿ ತರಲಾಗಿದೆ. ಆಸ್ತಿ ವರ್ಗಾವಣೆಗೆ ಮೊದಲು ನಡೆಸುವ ಜಿಪಿಎ ಕೂಡ ಕಡ್ಡಾಯವಾಗಿ ನೋಂದಣಿ ಮಾಡಬೇಕು. ಆಸ್ತಿ ವರ್ಗಾವಣೆ ಸಮಯದಲ್ಲಿ ಪವರ್ ಆಫ್ ಅಟಾರ್ನಿ ಬರೆದು ಕೊಡುವವರು ಬದುಕಿರುವುದನ್ನು ಖಚಿತಪಡಿಸಲು ಸೂಕ್ತ ಪುರಾವೆ ಹಾಜರುಪಡಿಸಬೇಕು. ಇದು ಅಕ್ರಮ ಆಸ್ತಿ ವರ್ಗಾವಣೆ, ನೋಂದಣಿ, ಭೂಕಬಳಿಗೆ ಮತ್ತು ಒತ್ತುವರಿ ಪ್ರಕರಣಗಳನ್ನು ತಪ್ಪಿಸಲಿದೆ.
(2025 ರ ಜುಲೈ ತಿಂಗಳ 28ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ) ನೋಂದಣಿ (ಕರ್ನಾಟಕ ತಿದ್ದುಪಡಿ) ಅಧಿನಿಯಮ, (2025 ರ ಜುಲೈ ತಿಂಗಳ 22ನೇ ದಿನಾಂಕದಂದು ರಾಷ್ಟ್ರಾಧ್ಯಕ್ಷರ ಅನುಮತಿಯನ್ನು ಪಡೆಯಲಾಗಿದೆ) ಕರ್ನಾಟಕ ರಾಜ್ಯಕ್ಕೆ ಅನ್ವಯವಾಗುವಂತೆ ನೋಂದಣಿ ಅಧಿನಿಯಮ, 1908 (1908ರ ಕೇಂದ್ರ ಅಧಿನಿಯಮ 16) ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ. ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ರಾಜ್ಯಕ್ಕೆ ಅನ್ವಯವಾಗುವಂತೆ ನೋಂದಣಿ ಅಧಿನಿಯಮ, 1908 (1908ರ ಕೇಂದ್ರ ಅಧಿನಿಯಮ 16)ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ ಇದು ಭಾರತ ಗಣರಾಜ್ಯದ ಎಪ್ಪತ್ತಾರನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿದೆ.
ಈ ಅಧಿನಿಯಮವನ್ನು ನೋಂದಣಿ (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2025 ಎಂದು ಕರೆಯತಕ್ಕದ್ದು. (2) ಇದು ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದಂಥ ದಿನಾಂಕದಂದು ಜಾರಿಗೆ ಬರತಕ್ಕದ್ದು. ಉಪ-ಪ್ರಕರಣದಲ್ಲಿನ (ಇ) ಖಂಡದ ತರುವಾಯ ಪರಂತುಕಕ್ಕೆ ಮೊದಲು ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-"(ಎಫ್) ಪ್ರತಿಫಲದೊಂದಿಗೆ (ii) (2)ನೇ ಉಪ-ಪ್ರಕರಣದ (vii)ನೇ ಖಂಡ ಮತ್ತು ಅದಕ್ಕೆ ಸಂಬಂಧಿಸಿದ ನಮೂದುಗಳನ್ನು ಬಿಟ್ಟುಬಿಡತಕ್ಕದ್ದು. ಪ್ರಕರಣ 33ರ ತಿದ್ದುಪಡಿ.- ಮೂಲ ಅಧಿನಿಯಮದ 33ನೇ ಪ್ರಕರಣದ (4)ನೇ ಉಪ- ಪ್ರಕರಣದಲ್ಲಿ,-(i) "ರುಜುವಾತುಪಡಿಸಬಹುದು" ಎಂಬ ಪದಗಳ ಬದಲಿಗೆ "ರುಜುವಾತುಪಡಿಸತಕ್ಕದ್ದು" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು; ಮತ್ತು (ii) (4)ನೇ ಉಪ-ಪ್ರಕರಣದ ತರುವಾಯ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-"ಪರಂತು ಮುಖ್ಯಾರನಾಮೆಯನ್ನು ಬರೆದುಕೊಡುವ ವ್ಯಕ್ತಿಯು ಬದುಕಿರುವ ಕುರಿತು ಪುರಾವೆಯನ್ನು ಈ ಅಧಿನಿಯಮದಡಿ ಮಾಡಲಾದ ನಿಯಮಗಳಲ್ಲಿ ನಿರ್ದಿಷ್ಟಪಡಿಸಿದಂತೆ ಹಾಜರುಪಡಿಸತಕ್ಕದ್ದು. "ಪ್ರಕರಣ 89ರ ತಿದ್ದುಪಡಿ.- ಮೂಲ ಅಧಿನಿಯಮದ 89ನೇ ಪ್ರಕರಣದ (4)ನೇ ಉಪ-ಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು.