ಬೆಂಗಳೂರು: ಸಹಕಾರ ಸಂಘಗಳು ಮತ್ತು ಸೌಹಾರ್ದ ಸಹಕಾರಿಗಳಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ವ್ಯವಸ್ಥೆ ಅಳವಡಿಕೆಗೆ ಅವಕಾಶ ಕಲ್ಪಿಸುವುದು, ಒಬಿಸಿ ನಿರುದ್ಯೋಗಿಗಳಿಗೆ ಎಲೆಕ್ಟ್ರಿಕ್ ವಾಹನ ಖರೀದಿಗೆ ಸಹಾಯಧನ ದೇವದಾಸಿಯರ ಮಕ್ಕಳ ಕಲ್ಯಾಣಕ್ಕೆ ವಿವಿಧ ಸೌಲಭ್ಯ ಸೇರಿದಂತೆ 17 ವಿಧೇಯಕಗಳಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. 2021-22ನೇ ಸಾಲಿನ RIDF ಟ್ರಾಂಚ್-27ರಡಿ ನಬಾರ್ಡ್ನಿಂದ ಅನುಮೋದನೆಗೊಂಡು ನಿರ್ಮಿಸುತ್ತಿರುವ ಕೃಷಿ ಇಲಾಖೆಯ 13 ಶೀತಲ ಘಟಕಗಳ ನಿರ್ಮಾಣ ಕಾಮಗಾರಿಗಳ ರೂ.171.91 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಹಾಗೂ ಹೆಚ್ಚುವರಿ ಮೊತ್ತ ರೂ.47.81 ಕೋಟಿಗಳನ್ನು ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕದಿಂದ ಭರಿಸಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಕರ್ನಾಟಕ ಕೃಷಿ ಬೆಲೆ ಆಯೋಗದ ಕರ್ತವ್ಯಗಳು (Duties) ಷರತ್ತು ಮತ್ತು ನಿಬಂಧನೆಗಳನ್ನು (Terms of Reference) ಹೊರಡಿಸಿರುವ ತಿದ್ದುಪಡಿ ಆದೇಶ : AGRI/45/ACT/2025, ໖: 15.05.2025ಕ್ಕೆ ಘಟನೋತ್ತರ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು. ಈ ಕೆಳಗಿನ ಕಾಯ್ದೆಗಳನ್ವಯ ಕೃಷಿ ಉತ್ಪನ್ನಗಳಿಗೆ ಮುಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಮಾರ್ಗೋಪಾಯಗಳನ್ನು ರೂಪಿಸಿ, ಸರ್ಕಾರಕ್ಕೆ ಶಿಫಾರಸ್ಸು ಮಾಡುವುದು. ಪ್ರಸ್ತುತ ಮುಕ್ತ ಮಾರುಕಟ್ಟೆ ವ್ಯವಸ್ಥೆಯಲ್ಲಿ ಅಪ್ರಸ್ತುತವಾಗಿದೆ. ಆದುದರಿಂದ ಕೃಷಿ ಬೆಲೆ ಆಯೋಗದ ಕರ್ತವ್ಯಗಳನ್ನು ಮಾರ್ಪಡಿಸಿ, ತಿದ್ದುಪಡಿ ಆದೇಶ ನೀಡುವುದಕ್ಕೆ ಪ್ರಸ್ತಾಪಿಸಲಾಗಿತ್ತು.
ಕರ್ನಾಟಕ ಕೃಷಿ ಉತ್ಪನ್ನ ಮಾರಾಟ ನಿಯಂತ್ರಣ ಅಭಿವೃದ್ಧಿ ಕಾಯ್ದೆ ತಿದ್ದುಪಡಿ (2020). ಕೇಂದ್ರ ಸರ್ಕಾರದ ರೈತ ಉತ್ಪನ್ನ ಮತ್ತು ವಾಣಿಜ್ಯ ಉತ್ತೇಜನ ಹಾಗೂ ಸೌಲಭ್ಯ ಕಾಯ್ದೆ ಸುಗ್ರೀವಾಜ್ಞೆ (2020). ಕರ್ನಾಟಕ ಕೃಷಿ ಉತ್ಪನ್ನ ಮಾರಾಟ ನಿಯಂತ್ರಣ ಅಭಿವೃದ್ಧಿ ಕಾಯ್ದೆ ತಿದ್ದುಪಡಿ (2020). ಕೇಂದ್ರ ಸರ್ಕಾರದ ರೈತ ಉತ್ಪನ್ನ ಮತ್ತು ವಾಣಿಜ್ಯ ಉತ್ತೇಜನ ಹಾಗೂ ಸೌಲಭ್ಯ ಕಾಯ್ದೆ ಸುಗ್ರೀವಾಜ್ಞೆ (2020) ರೈತರ ಸಾಮರ್ಥ್ಯಾಭಿವೃದ್ಧಿ ಮತ್ತು ರಕ್ಷಣೆ (ರೈತರ ಬೆಲೆ ಖಾತರಿ ಒಪ್ಪಂದ ಮತ್ತು ಕೃಷಿ ಸೇವೆಗಳು) ಕಾಯ್ದೆ ಸುಗ್ರೀವಾಜ್ಞೆ (2020) ಅಗತ್ಯ ವಸ್ತುಗಳ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ (2020) ಹೀಗೆ ಹಲವು ಕಾಯ್ದೆಗಳಿಗೆ ಅನುಮೋದನೆ ನೀಡಲಾಗಿದೆ.