image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಧರ್ಮಸ್ಥಳ ಪ್ರಕರಣದ ತನಿಖೆ ನಡೆದು ಸತ್ಯಾಸತ್ಯತೆ ಹೊರಗೆ ಬರಲಿದೆ‌ : ಗೃಹ ಸಚಿವ ಜಿ.ಪರಮೇಶ್ವರ್

ಧರ್ಮಸ್ಥಳ ಪ್ರಕರಣದ ತನಿಖೆ ನಡೆದು ಸತ್ಯಾಸತ್ಯತೆ ಹೊರಗೆ ಬರಲಿದೆ‌ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು: ಧರ್ಮಸ್ಥಳ ಪ್ರಕರಣವನ್ನು ಎನ್ಐಎಗೆ ಕೊಡುವ ಅಗತ್ಯ ಇಲ್ಲ. ಎಸ್ಐಟಿನವರೇ ಸಮರ್ಥವಾಗಿ ತನಿಖೆ ಮಾಡ್ತಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು. ಸದಾಶಿವನಗರ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ತನಿಖೆ ವಿಚಾರವಾಗಿ ಪ್ರತಿಕ್ರಿಯಿಸಿ, ಸತ್ಯ ಹೊರಗೆ ಬರಬೇಕು ಅಂತ ಕೋಟ್ಯಂತರ ಭಕ್ತರು ಕಾಯ್ತಿದ್ದಾರೆ. ಆರೋಪಿ ಚಿನ್ನಯ್ಯನನ್ನು ಬಂಧನ ಮಾಡಿ ವಿಚಾರಣೆ ಮಾಡ್ತಿದ್ದಾರೆ. ಎಸ್ಐಟಿನವರು ತಮ್ಮ ಪರಿಮಿತಿಯಲ್ಲಿ ತನಿಖೆ ಮಾಡ್ತಿದ್ದಾರೆ. ಧರ್ಮಸ್ಥಳ ಪ್ರಕರಣವನ್ನು ಎನ್ಐಎಗೆ ಕೊಡುವ ಅಗತ್ಯ ಇಲ್ಲ. ಎಸ್ಐಟಿನವ್ರೇ ಸಮರ್ಥವಾಗಿ ತನಿಖೆ ಮಾಡ್ತಿದ್ದಾರೆ. ಎಸ್ಐಟಿನವರು ವರದಿ ಕೊಡಲಿ. ನಂತರ ಪರ ವಿರೋಧ ಚರ್ಚೆ ನೋಡಿಕೊಂಡು ಮುಂದೆ ನೋಡೋಣ. ಈಗಿನ ಹಂತದಲ್ಲಿ ಎನ್ಐಎಗೆ ಕೊಡುವ ಅಗತ್ಯ ಇಲ್ಲ ಎಂದರು. ಎಸ್ಐಟಿ ರಚನೆ ವಿಚಾರದಲ್ಲಿ ಸರ್ಕಾರದ ನಡೆಗೆ ಬಿಜೆಪಿ ಆಕ್ಷೇಪ ವಿಚಾರವಾಗಿ ಪ್ರತಿಕ್ರಿಯಿಸಿ, ಬಹಳ ಗಂಭೀರವಾಗಿ ತನಿಖೆ ನಡೆಯುತ್ತಿದೆ. ಯಾವ ಆಧಾರದ ಮೇಲೆ ಸರ್ಕಾರವನ್ನು ತಪ್ಪಿತಸ್ಥರು ಅಂತ ಹೇಳ್ತಾರೆ. ಎಲ್ಲಾ ರೀತಿಯ ಕ್ರಮವನ್ನು ನಾವು ತೆಗೆದುಕೊಂಡಿದ್ದೇವೆ. ಎಸ್‌ಐಟಿ ಮಾಡಿದ್ದೇ ಷಡ್ಯಂತ್ರ ಎಂದರೆ ವಿಪರ್ಯಾಸ ಅಂತ ಹೇಳಬೇಕಾಗುತ್ತದೆ. ಕೋಟ್ಯಂತರ ಭಕ್ತರು ಧರ್ಮಸ್ಥಳದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಹೀಗಾಗಿ ಸತ್ಯಾಸತ್ಯತೆ ಹೊರಗೆ ಬರಬೇಕು ಎಂಬುದು ಇದೆ. ಹಾಗಾಗಿ ಎಸ್ಐಟಿ ಮೇಲೆ ಜವಾಬ್ದಾರಿ ಇದೆ. ಚಿನ್ನಯ್ಯ ಬಂಧನ ಆದ ಮೇಲೆ ಅದರ ಫಾಲೋ ಅಪ್ ಕೂಡ ಆಗ್ತಿದೆ. ಆದಷ್ಟು ಬೇಗ ತನಿಖೆ ನಡೆದು ಸತ್ಯಾಸತ್ಯತೆ ಹೊರಗೆ ಬರಲಿದೆ‌. ತನಿಖೆ ಬೇಗ ಮುಗಿಸಬೇಕು ಅಂತ ಎಸ್‌ಐಟಿ ಅವರೂ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು. ಮಹೇಶ್ ತಿಮರೋಡಿ ಮನೆ ಮೇಲೆ ಎಸ್‌ಐಟಿ ರೇಡ್ ವಿಚಾರವಾಗಿ ಪ್ರತಿಕ್ರಿಯಿಸಿ, ಸರ್ಕಾರ ಎಸ್ಐಟಿಗೆ ಯಾವುದೇ ನಿರ್ದೇಶನ ಕೊಡಲ್ಲ. ನಾವು ಆದೇಶದಲ್ಲಿ ಟರ್ಮ್ಸ್ ಆಫ್ ರೆಫರೆನ್ಸ್ ಕೊಟ್ಟಿದ್ದೇವೆ. ಎಸ್ಐಟಿ ಅವರದೇ ಆಯಾಮದಲ್ಲಿ ತನಿಖೆ ಮಾಡುತ್ತಿದ್ದಾರೆ. ಅವರು ಯಾರನ್ನು ವಿಚಾರಣೆಗೆ ಕರೆಯುತ್ತಾರೆ, ಯಾರ ಮೇಲೆ ರೇಡ್ ಮಾಡ್ತಾರೆ ಅದನ್ನೆಲ್ಲ ನಮಗೆ ಹೇಳಿ ಕೇಳಿ ಮಾಡೋದಿಲ್ಲ. ಅವರು ತನಿಖೆಯ ಆಧಾರದ ಮೇಲೆ ಮಾಹಿತಿ ಆಧಾರದ ಮೇಲೆ ಮಾಡುತ್ತಾರೆ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದರು.‌

Category
ಕರಾವಳಿ ತರಂಗಿಣಿ