ಬೆಂಗಳೂರು : ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿ ಹಾಗೂ ತೆಗೆದುಕೊಂಡ ಕ್ರಮಗಳ ಕುರಿತು ರಾಜ್ಯದ ಎಲ್ಲಾ ವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ವಿಡಿಯೋ ಸಂವಾದ ನಡೆಸಿದ ಬಳಿಕ ಬೆಳೆ ನಷ್ಟ ಪರಿಹಾರದ ಮೊತ್ತ ಹೆಚ್ಚಳ ಮಾಡುವುದಾಗಿ ಹೇಳಿದ್ದಾರೆ. ಮಳೆಯಿಂದ ರಾಜ್ಯದ ಹಲವು ಕಡೆ ವ್ಯಾಪಕವಾಗಿ ಬೆಳೆ ಹಾನಿಯಾಗಿದ್ದು, ರೈತರಿಗೆ ಎಸ್‌ಡಿಆರ್‌ಎಫ್ ಮಾರ್ಗಸೂಚಿಗಿಂತ ಹೆಚ್ಚಿನ ಪರಿಹಾರ ನಿಗದಿ ಮಾಡುವ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು. ಎಸ್ಡಿಆರ್‌ಎಫ್ ಮಾರ್ಗಸೂಚಿಯಂತೆ ಪರಿಹಾರ ನೀಡಿದರೆ ರೈತರಿಗೆ ಹೆಚ್ಚಿನ ಹಣ ಸಿಗುವುದಿಲ್ಲ ಎಂಬ ಕಾರಣಕ್ಕೆ ಪರಿಹಾರ ಮೊತ್ತ ಹೆಚ್ಚಳ ಮಾಡಲು ಹಾಗೂ ಈ ಹೆಚ್ಚುವರಿ ಹೊರೆಯನ್ನು ರಾಜ್ಯ ಸರಕಾರವೇ ಭರಿಸಲು ನಿರ್ಧರಿಸಿದೆ ಎಂದರು.