image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಹೃದಯ ಆರೋಗ್ಯಕ್ಕಾಗಿ ಮೈಲು ಗಟ್ಟಲೆ ನಡೆದ ಶಿವಮೊಗ್ಗದ ಜನತೆ

ಹೃದಯ ಆರೋಗ್ಯಕ್ಕಾಗಿ ಮೈಲು ಗಟ್ಟಲೆ ನಡೆದ ಶಿವಮೊಗ್ಗದ ಜನತೆ

ಶಿವಮೊಗ್ಗ: ವಿಶ್ವ ಹೃದಯ ದಿನದ ಅಂಗವಾಗಿ ಶಿವಮೊಗ್ಗ ನಗರದ ಪ್ರತಿಷ್ಠಿತ ಸಹ್ಯಾದ್ರಿ ನಾರಾಯಣ ಆಸ್ಪತ್ರೆ ವತಿಯಿಂದ ಭಾನುವಾರ ಬೆಳಗ್ಗೆ ಹಮ್ಮಿಕೊಂಡಿದ್ದ ವಾಕಥಾನ್ ಗೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಯಿತು. ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ ಸಾವಿರಾರು ಜನರು ವಾಕಥಾನ್ ನಲ್ಲಿ ಹೆಜ್ಜೆ ಹಾಕಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕೆ ಎಸ್ ನಟರಾಜ್ ಅವರು ಹೃದಯವು ಮನುಷ್ಯ ಹುಟ್ಟಿನಿಂದ ಸಾಯುವವರೆಗೂ ಸತತವಾಗಿ ಬಡೆದುಕೊಳ್ಳುತ್ತದೆ, ಸತತವಾಗಿ ಕಾರ್ಯನಿರ್ವಹಿಸುವ ಈ ಅಂಗಕ್ಕೆ ನಾವು ಕಾಳಜಿ ವಹಿಸುವುದು ಅತ್ಯವಶ್ಯಕ. ಇಂದಿನ ದಿನಮಾನಗಳಲ್ಲಿ ಸಣ್ಣ ಯುವ ವಯಸ್ಸಿನ ಯುವಕರು ಸಹ ಹೃದಯಘಾತಕ್ಕೆ ಬಲಿಯಾಗುತ್ತಿರುವುದು ಕಳವಳಕಾರಿಯಾಗಿದೆ, ಎಂದರು. ಹೃದಯದ ಆರೋಗ್ಯಕ್ಕೆ ಹೆಚ್ಚು ಮಹತ್ವ ಕೊಡಿ ಅದು ಎಷ್ಟು ಸರಿಯಾಗಿ ಕೆಲಸ ಮಾಡುತ್ತದೆಯೋ ಅಷ್ಟು ಜೀವನ ಆರೋಗ್ಯಕರವಾಗಿರುತ್ತದೆ. ಹೃದಯದ ಸಮಸ್ಯೆಗಳಿಗೆ ಒತ್ತಡಮಯ ಜೀವನವು ಒಂದು ಕಾರಣವಾಗಿದ್ದು ಒತ್ತಡದಿಂದ ಹೊರಬನ್ನಿ, ಆರೋಗ್ಯಕರ ಜೀವನ ರೂಡಿಸಿಕೊಳ್ಳಿ, ನಿತ್ಯವೂ ವ್ಯಾಯಾಮ ಮಾಡಿ ಜೀವನಶೈಲಿ ಬದಲಾವಣೆ ಮಾಡಿಕೊಳ್ಳಿ ಇದೆಲ್ಲವೂ ಮಾಡುವುದರಿಂದ ಹೃದಯವು ಆರೋಗ್ಯವಾಗಿರುವಂತೆ ನೋಡಿಕೊಳ್ಳಲು ಸಾಧ್ಯ ಎಂದು ಅವರು ಹೇಳಿದರು. ತಾಲೂಕ ಆರೋಗ್ಯ ಅಧಿಕಾರಿ ಡಾ. ಚಂದ್ರಶೇಖರ್‌, ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವೈದ್ಯಕೀಯ ನಿರ್ದೇಶಕರಾದ ಶ್ರೀ ವರ್ಗೀಸ್‌ ಪಿ ಜಾನ್, ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಶ್ರೀ ಶೈಲೇಶ್‌ ಎಸ್‌. ಎನ್. ಶ್ರೀ ರಾಜಪ್ಪ ಅಸಿಸ್ಟಂಟ್‌ ಕಮಾಡೆಂಟ್‌ ಶಿವಮೊಗ್ಗ, ಡಾ.ಅಶ್ವಲ್‌ ಎ ಜೆ, ಡಾ. ವಿಕ್ರಂ ಎಂಜೆ, ಡಾ. ಅಜಿತ್‌ ಶೆಟ್ಟಿ, ವೈದ್ಯಕೀಯ ಅಧೀಕ್ಷಕರಾದ ಡಾ.ಚಕ್ರವರ್ತಿ ಸಂಡೂರ್‌, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಇದ್ದರು. ವಾಕಾಥಾನ್‌ ನಲ್ಲಿ ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

Category
ಕರಾವಳಿ ತರಂಗಿಣಿ