image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕರ್ನಾಟಕ ರಾಜಕಾರಣದಲ್ಲಿ ಯಾರೂ ನಿರೀಕ್ಷಿಸದಂತಹ ಕ್ರಾಂತಿ ಆಗಲಿದೆ : ಹೆಚ್ ಡಿ ಕೆ

ಕರ್ನಾಟಕ ರಾಜಕಾರಣದಲ್ಲಿ ಯಾರೂ ನಿರೀಕ್ಷಿಸದಂತಹ ಕ್ರಾಂತಿ ಆಗಲಿದೆ : ಹೆಚ್ ಡಿ ಕೆ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆಗಳು ನಡೆಯುವ ಸುಳಿವು ನೀಡಿದ್ದಾರೆ.ಬೆಂಗಳೂರಿನಲ್ಲಿ ಶನಿವಾರದಂದು ಜೆಡಿಎಸ್ ಪಕ್ಷದ ಬೆಳ್ಳಿಹಬ್ಬದ ಸಮಾರಂಭದಲ್ಲಿ ಪಾಲ್ಗೊಂಡು ಕಾರ್ಯಕರ್ತರು, ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; ರಾಜ್ಯದಲ್ಲಿ ಇವತ್ತು ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ನೋಡಿದರೆ ಮುಂದಿನ ದಿನಗಳಲ್ಲಿ ಯಾರೂ ಕೂಡ ನಿರೀಕ್ಷೆ ಮಾಡದಂತಹ ಬೆಳವಣಿಗೆಗಳು ನಡೆಯಲಿವೆ ಎಂದು ಭವಿಷ್ಯ ನುಡಿದರು. ರಾಜಕೀಯದಲ್ಲಿ ಯಾರು ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಹೇಳಲಿಕ್ಕೆ ಆಗದಂತಹ ಪರಿಸ್ಥಿತಿ ರಾಜ್ಯದಲ್ಲಿ ಸೃಷ್ಟಿ ಆಗಿದೆ. ರಾಜ್ಯ ರಾಜಕಾರಣದಲ್ಲಿ ಅನಿರೀಕ್ಷಿತ ಮತ್ತು ಸ್ಪೋಟಕ ಬೆಳವಣಿಗೆಗಳು ನಡೆಯಲಿವೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಪರೋಕ್ಷವಾಗಿ ಆಡಳಿತ ಪಕ್ಷ ಕಾಂಗ್ರೆಸ್ ನಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಬೊಟ್ಟು ಮಾಡಿದ ಅವರು; ದಿನಕ್ಕೊಂದು, ಕ್ಷಣಕ್ಕೊಂದು ರಾಜಕೀಯ ಬೆಳವಣಿಗೆ ನಡೆಯುತ್ತಿರುವುದು ನೋಡಿದರೆ ಕೆಲವೇ ತಿಂಗಳಲ್ಲಿ ರಾಜ್ಯದಲ್ಲಿ ರಾಜಕೀಯ ಕ್ರಾಂತಿಯೇ ಆಗುವ ಸಾಧ್ಯತೆ ಇದೆ. ಹೀಗಾಗಿ ಕಾರ್ಯಕರ್ತರು ಮತ್ತು ಮುಖಂಡರು ಜನರ ಜತೆಯೇ ಇರಬೇಕು. ಜನರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಕೇಂದ್ರ ಸಚಿವರು ಕರೆ ನೀಡಿದರು.

ಜನ ಕೆಟ್ಟ ಆಡಳಿತದಿಂದ ರೋಸಿ ಹೋಗಿದ್ದಾರೆ. ತೆರಿಗೆ, ದರ ಏರಿಕೆ ಸುಳಿಗೆಯಿಂದ ಬೇಸತ್ತು ಹೋಗಿದ್ದಾರೆ. ಮುಂದೆ ನಮ್ಮ ಪಕ್ಷಕ್ಕೆ ಒಂದು ಅವಕಾಶ ಕೊಡಿ. ಐದು ವರ್ಷದಲ್ಲಿ‌ ಯಾವ ರೀತಿ ಆಡಳಿತ ಕೊಡಬೇಕು, ಜನರಿಗೆ ಏನೆಲ್ಲ ಒಳ್ಳೆಯದು ಮಾಡಬೇಕು ಎಂಬುದನ್ನು ಸಾಬೀತು ಮಾಡಿ ತೋರಿಸುತ್ತೇನೆ. ಒಂದು ವೇಳೆ ಜನ ಮೆಚ್ಚುವ ಸರ್ಕಾರ ನನ್ನಿಂದ ಕೊಡಲು ಆಗದಿದ್ದರೆ ಈ ಜನ್ಮದಲ್ಲಿ ಮತ್ತೆ ನನ್ನ ಮುಖ ತೋರಿಸಲ್ಲ ಎಂದು ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ. ರಾಜ್ಯದ ಸಾಲ 7.50 ಲಕ್ಷ ಕೋಟಿ ದಾಟಿದೆ. ಸಿದ್ಧರಾಮಯ್ಯ ಒಬ್ಬರೇ 5ರಿಂದ 5.50 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಏನಕ್ಕೆ ಮಾಡಿದ್ರು ಇಷ್ಟು ಸಾಲವನ್ನು? ಯಾವ ಪುರುಷಾರ್ಥಕ್ಕೆ ಮಾಡಿದ್ರು ಎಂಬುದನ್ನು ಜನರಿಗೆ ಉತ್ತರ ಕೊಡಬೇಕು ಎಂದು ಅವರು ಒತ್ತಾಯ ಮಾಡಿದರು.

Category
ಕರಾವಳಿ ತರಂಗಿಣಿ