ಬೆಂಗಳೂರು : ಬೀದಿನಾಯಿ'ಗಳ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರ ಶಿಕ್ಷಣ ಸಂಸ್ಥೆಗೆ ನೋಟಿಸ್ ನೀಡಿದ್ದು, ಶಿಕ್ಷಕರು ಆಕ್ರೋಶ ಹೊರ ಹಾಕಿದ್ದಾರೆ. ಪಾಠ ಮಾಡೋದನ್ನ ಬಿಟ್ಟು ನಾವು ನಾಯಿ ಕಾಯುವ ಕೆಲಸ ಮಾಡಬೇಕಾ ಎಂದು ಕೆಲವರು ಅಸಮಾಧಾನ ಹೊರ ಹಾಕಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಬೀದಿ ನಾಯಿಗಳ ಉಪಟಳವನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಮಾನ್ಯ ಸರ್ವೋಚ್ಚ ನ್ಯಾಯಾಲಯವು ಸ್ವಯಂ ಪ್ರೇರಿತ ರಿಟ್ ಅರ್ಜಿ ಸಂಖ್ಯೆ: 5/2025ರ ದಿನಾಂಕ: 07.11.2025ರ ತೀರ್ಪಿನಲ್ಲಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಬೀದಿ ನಾಯಿಗಳ ಉಪಟಳವನ್ನು ತಡೆಗಟ್ಟಲು ನಿರ್ದೇಶನ ನೀಡಿರುತ್ತದೆ. ಈ ಸಂಬಂಧ ಉಲ್ಲೇಖಿತ (2) ರ ಸುತ್ತೋಲೆಯಲ್ಲಿ ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಬೀದಿ ನಾಯಿಗಳ ಉಪಟಳವನ್ನು ತಟೆಗಟ್ಟುವ ನಿಟ್ಟಿನಲ್ಲಿ ಅನುಸರಿಬೇಕಾದ ಕ್ರಮಗಳ ಬಗ್ಗೆ ಸೂಚನೆಗಳನ್ನು ನೀಡಲಾಗಿದೆ. ಉಲ್ಲೇಖಿತ ಆದೇಶಗಳಂತೆ, ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಬೀದಿ ನಾಯಿಗಳ ಉಪಟಳವನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕೆಳಕಂಡಂತೆ ಕ್ರಮವಹಿಸಲು ತಿಳಿಸಿದೆ.