image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಡಿಸೆಂಬರ್ 15ಕ್ಕೆ ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ

ಡಿಸೆಂಬರ್ 15ಕ್ಕೆ ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ

ಶಿವಮೊಗ್ಗ: ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ ವೈಭವ 2025ರ ಅದ್ಭುತ ಕಾರ್ಯಕ್ರಮದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಆಳ್ವಾಸ್ ನುಡಿಸಿರಿ ವಿರಾಸತ್ ಶಿವಮೊಗ್ಗ ಜಿಲ್ಲಾ ಘಟಕದಿಂದ ಆಯೋಜಿಸಿರುವ ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ ವೈಭವ 2025 ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ಡಿಸೆಂಬರ್ 15ರಂದು ಸಂಜೆ 5.30ರಿಂದ ಅಲ್ಲಮ ಪ್ರಭು ಬಯಲು ಫ್ರೀಡಂ ಪಾರ್ಕ್ ನಲ್ಲಿ ಕಲೆ, ಸಂಗೀತ, ನೃತ್ಯ, ಯಕ್ಷಗಾನ ಸಂಸ್ಕೃತಿ ಅನಾವರಣಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 300 ವಿದ್ಯಾರ್ಥಿ ಕಲಾವಿದರಿಂದ 3 ಗಂಟೆ ಆಳ್ವಾಸ್ ಸಾಂಸ್ಕೃತಿಕ ವೈಭವ ನಡೆಯಲಿದೆ ಎಂದು ಹೇಳಿದರು.

ಪದವೀಧರ ಸಹಕಾರ ಸಂಘದ ಅಧ್ಯಕ್ಷ ಎಸ್.ಪಿ.ದಿನೇಶ್, ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್, ಶ್ರೀ ಬಸವೇಶ್ವರ ಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಬಳ್ಳೆಕೆರೆ ಸಂತೋಷ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಸಹ ಕಾರ್ಯದರ್ಶಿ ಕೆ.ಎಸ್.ಸುಕುಮಾರ್, ಖಜಾಂಚಿ ಆರ್.ಮನೋಹರ್ ನಿರ್ದೇಶಕರಾದ ಡಾ. ಲಕ್ಷ್ಮೀದೇವಿ ಗೋಪಿನಾಥ್, ಬಿ.ಸುರೇಶ್ ಕುಮಾರ್, ಪ್ರದೀಪ್ ವಿ ಯೆಲಿ, ವಸಂತ್ ಹೋಬಳಿದಾರ್, ಗಣೇಶ್ ಎಂ ಅಂಗಡಿ, ಜಿ.ವಿ.ಕಿರಣ್ ಕುಮಾರ್, ರವಿಪ್ರಕಾಶ್ ಜೆನ್ನಿ, ಪಿ.ರುದ್ರೇಶ್, ಕೆ.ಬಿ.ಶಿವಕುಮಾರ್, ಕೆ.ಎನ್.ರಾಜಶೇಖರ್, ಸಿ.ಎ.ಶರತ್, ಎಸ್.ಎಸ್.ಉದಯ್ ಕುಮಾರ್, ವಿನೋದ್ ಕುಮಾರ್, ಎಸ್.ಪಿ.ಶಂಕರ್ ಹಾಗೂ ಮಾಜಿ ಅಧ್ಯಕ್ಷರಾದ ಎನ್.ಗೋಪಿನಾಥ್, ಅಶ್ವಥ್ ನಾರಾಯಣ್ ಶೆಟ್ಟಿ, ಜೆ.ಆರ್.ವಾಸುದೇವ್ ಹಾಗು ಸದಸ್ಯರಾದ ಮಧುಮಿತಾ ಇತರರು ಭಾಗವಹಿಸಿದ್ದರು.

Category
ಕರಾವಳಿ ತರಂಗಿಣಿ