image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ರಾಜ್ಯದ ಜಿಲ್ಲಾ, ತಾಲೂಕು, ಗ್ರಾಮ ಪಂಚಾಯಿತಿಗಳಿಗೆ ಏಪ್ರಿಲ್ ನಲ್ಲಿ ಚುನಾವಣೆ!

ರಾಜ್ಯದ ಜಿಲ್ಲಾ, ತಾಲೂಕು, ಗ್ರಾಮ ಪಂಚಾಯಿತಿಗಳಿಗೆ ಏಪ್ರಿಲ್ ನಲ್ಲಿ ಚುನಾವಣೆ!

ಬೆಳಗಾವಿ : ಗ್ರಾಮ ಪಂಚಾಯ್ತಿ, ತಾಲೂಕು ಮತ್ತು ಜಿಲ್ಲಾ ಪಂಚಾಯ್ತಿ, ವಿವಿಧ ಪುರಸಭೆ ಹಾಗೂ ನಗರಸಭೆ ಸೇರಿ ದಂತೆ 6500ಕ್ಕೂ ಹೆಚ್ಚು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆ ಗಳ ಚುನಾವಣೆಯನ್ನು 2026ರ ಏಪ್ರಿಲ್ನಲ್ಲಿ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಹ ತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕಳೆದ 4 ವರ್ಷಗಳಿಂದ ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಚುನಾವಣೆ ನಡೆದಿರಲಿಲ್ಲ. ಗ್ರಾಮ ಪಂಚಾಯ್ತಿಗಳ ಅವಧಿಯೂ ಮುಗಿಯುತ್ತಿದೆ. ಜಿ.ಪಂ., ತಾ.ಪಂ. ಚುನಾವಣೆ ವಿಳಂಬದ ಕೇಸ್ ಕೋರ್ಟ್ ನಲ್ಲಿದ್ದು, ತ್ವರಿತಗತಿಯಲ್ಲಿ ಚುನಾವಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯವೂ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿದ್ದು, ಏಪ್ರಿಲ್ ನಲ್ಲಿ ನಡೆಸಲು ಸಿದ್ಧತೆ ಮಾಡಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

Category
ಕರಾವಳಿ ತರಂಗಿಣಿ