image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಜನೌಷಧಿ ಕೇಂದ್ರ ಬಂದ್ ಮಾಡಿದ ಸರಕಾರದ ಆದೇಶ ರದ್ದು ಮಾಡಿದ ಹೈಕೋರ್ಟ್

ಜನೌಷಧಿ ಕೇಂದ್ರ ಬಂದ್ ಮಾಡಿದ ಸರಕಾರದ ಆದೇಶ ರದ್ದು ಮಾಡಿದ ಹೈಕೋರ್ಟ್

ಬೆಂಗಳೂರು : 34ಕ್ಕೂ ಹೆಚ್ಚು ಜನರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಜನೌಷಧಿ ಕೇಂದ್ರಗಳನ್ನು ನಿಷೇಧಿಸಿ ಆರೋಗ್ಯ ಇಲಾಖೆ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿತು. ಇದರಿಂದಾಗಿ ರಾಜ್ಯದಾದ್ಯಂತ ಇರುವ ನೂರಾರು ಜನೌಷಧಿ ಕೇಂದ್ರಗಳು ಮತ್ತು ಅಲ್ಲಿ ಕಡಿಮೆ ದರದಲ್ಲಿ ಔಷಧ ಪಡೆಯುತ್ತಿದ್ದ ಲಕ್ಷಾಂತರ ಬಡ ರೋಗಿಗಳಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಬಡತನ ರೇಖೆಗಿಂತ ಕೆಳಗಿರುವವರು, ಹಿರಿಯ ನಾಗರಿಕರು ಮತ್ತು ದೀರ್ಘಕಾಲದ ಕಾಯಿಲೆ ಇರುವವರಿಗೆ ಶೇ. 50 ರಿಂದ 90 ರಷ್ಟು ರಿಯಾಯಿತಿ ದರದಲ್ಲಿ ಔಷಧ ಒದಗಿಸುವ ಈ ಕೇಂದ್ರಗಳನ್ನು ಮುಂದುವರಿಸಲು ಹೈಕೋರ್ಟ್ ಹಸಿರು ನಿಶಾನೆ ತೋರಿದೆ.

Category
ಕರಾವಳಿ ತರಂಗಿಣಿ