image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕಾಂಗ್ರೆಸ್ ಗೆ ಬಹುಮತ ಬಂದಲ್ಲಿ ಸಭಾಪತಿ ಸ್ಥಾನದಿಂದ ಬಸವರಾಜ ಹೊರಟ್ಟಿ ಅವರನ್ನು ಕೆಳಗಿಳಿಸುವುದು ಖಚಿತ -ಸಿಎಂ

ಕಾಂಗ್ರೆಸ್ ಗೆ ಬಹುಮತ ಬಂದಲ್ಲಿ ಸಭಾಪತಿ ಸ್ಥಾನದಿಂದ ಬಸವರಾಜ ಹೊರಟ್ಟಿ ಅವರನ್ನು ಕೆಳಗಿಳಿಸುವುದು ಖಚಿತ -ಸಿಎಂ

ಹುಬ್ಬಳ್ಳಿ: ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಗೆ ಸದ್ಯಕ್ಕೆ ಬಹುಮತ ಇಲ್ಲ. ಹೀಗಾಗಿ ಬಸವರಾಜ ಹೊರಟ್ಟಿ ಅವರ ಸಭಾಪತಿ ಸ್ಥಾನಕ್ಕೆ ಧಕ್ಕೆ ಇಲ್ಲ. ಒಂದು ವೇಳೆ ಕಾಂಗ್ರೆಸ್ ಗೆ ಬಹುಮತ ಬಂದಲ್ಲಿ ಸಭಾಪತಿ ಸ್ಥಾನದಿಂದ ಬಸವರಾಜ ಹೊರಟ್ಟಿ ಅವರನ್ನು ಕೆಳಗಿಳಿಸುವುದು ಖಚಿತ. ಸ್ನೇಹವೇ ಬೇರೆ, ರಾಜಕಾರಣವೇ ಬೇರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಪರಿಷತ್ ಸದಸ್ಯರಾಗಿ 45 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಹೊರಟ್ಟಿ ಅಭಿಮಾನಿ ಬಳಗದಿಂದ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸ್ನೇಹವೇ ಬೇರೆ, ರಾಜಕೀಯವೇ ಬೇರೆ. ಸದ್ಯ ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಗೆ ಬಹುಮತಕ್ಕೆ ಒಂದು ಮತದ ಕೊರತೆ ಇದೆ. ಶೀಘ್ರದಲ್ಲಿಯೇ ಕಾಂಗ್ರೆಸ್ ಗೆ ಬಹುಮತ ಸಿಗಲಿದ್ದು, ಆಗ ಹೊರಟ್ಟಿಯವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲಾಗುವುದು. ರಾಜಕೀಯ, ಸ್ನೇಹ ಬೇರೆ ಬೇರೆ. ಬಿಜೆಪಿ ಅಭ್ಯರ್ಥಿಯಾಗಿದ್ದ ಬಸವರಾಜ ಹೊರಟ್ಟಿ ಅವರ ಸೋಲಿಗೆ ಯತ್ನಿಸಿದ್ದೆ. ಏನೇ ಆದರೂ ಅವರೊಂದಿಗೆ ಸ್ನೇಹ ನಿರಂತರವಾಗಿರುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಅವಿಶ್ವಾಸ ನಿರ್ಣಯ ಮಂಡಿಸುವುದು ಖಚಿತವೆಂದು ಸೂಚ್ಯವಾಗಿ ಸಿಎಂ ತಿಳಿಸಿದ್ದಾರೆ.

ಸಭಾಪತಿ ಬಸವರಾಜ್ ಹೊರಟ್ಟಿಯವರನ್ನು ಪಕ್ಷಾತೀತವಾಗಿ ಇಂದು ಸನ್ಮಾನಿಸಲಾಗಿದೆ. ಎಲ್ಲ ಪಕ್ಷದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಹೊರಟ್ಟಿಯವರು ಅಜಾತಶತ್ರು. ನೇರ ನುಡಿಯ ದಿಟ್ಟ ವ್ಯಕ್ತಿತ್ವದ ರಾಜಕಾರಣಿಯಾಗಿದ್ದಾರೆ. 1980 ರಲ್ಲಿ ವಿಧಾನಪರಿಷತ್ತಿನ ಶಾಸಕರಾಗಿದ್ದ ಇವರೊಂದಿನ ನನ್ನ ಸ್ನೇಹ ನಾಲ್ಕು ದಶಕಗಳದ್ದು. ಆಡಂಬರವಿಲ್ಲದ ಸ್ನೇಹಜೀವಿಯಾಗಿರುವ ಹೊರಟ್ಟಿಯವರು ಶಿಕ್ಷಕರ ಕ್ಷೇತ್ರದಿಂದ ಎಂಟು ಬಾರಿ ಶಾಸಕರಾಗಿದ್ದು, ಶಿಕ್ಷಕರ ಸಮಸ್ಯೆಗಳಿಗೆ ಧ್ವನಿಯಾಗಿದ್ದಾರೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ. 1983ರಲ್ಲಿ ಶಾಸಕರಾದ ನಂತರ ಹೊರಟ್ಟಿಯವರೊಂದಿಗೆ ಸ್ನೇಹ ಬೆಳೆಯಿತು. ಹಳ್ಳಿಗಾಡಿನ ನಂಟಿರುವ ಇಬ್ಬರೂ ಸಾಮಾನ್ಯಕುಟುಂಬದಿಂದ ಬಂದವರು. ಅಧಿಕಾರ ಮತ್ತು ಹುದ್ದೆಯೊಂದಿಗೆ ವ್ಯಕ್ತಿತ್ವದ ನಂಟು ಹೊಂದುವ ವರ್ಗ ಒಂದಾದರೆ, ಅಧಿಕಾರದ ಹಿರಿಮೆಯನ್ನು ಕಾಯ್ದುಕೊಳ್ಳುವ ವರ್ಗವಿದ್ದು ಹೊರಟ್ಟಿಯವರದು ಎರಡನೇ ವರ್ಗವಾಗಿದೆ. 45 ವರ್ಷಗಳ ರಾಜಕೀಯ ಬದುಕಿನಲ್ಲಿ ಅವರೆಂದಿಗೂ ಅಹಂಕಾರ ತೋರಿದವರಲ್ಲ. ನಾವು ಒಂದೇ ಪಕ್ಷದಲ್ಲಿದ್ದಾಗ ಜೆಡಿಯು ಮತ್ತು ಜೆಡಿಎಸ್ ಪಕ್ಷಗಳನ್ನು ಒಂದುಗೂಡಿಸಲು ಬಹುವಾಗಿ ಪ್ರಯತ್ನಿಸಿದರು, ಆದರೆ ಹಿರಿಯ ನಾಯಕರು ಒಪ್ಪದಿದ್ದ ಕಾರಣ, ಅವರ ಈ ಪ್ರಯತ್ನಕ್ಕೆ ಫಲ ದೊರೆಯಲಿಲ್ಲ ಎಂದರು.

Category
ಕರಾವಳಿ ತರಂಗಿಣಿ