image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಅಗತ್ಯ ವಿಷಯಗಳಲ್ಲಿ ಪದವಿ ಹೊಂದಿದ ಶಿಕ್ಷಕರು 6, 7ನೇ ತರಗತಿಗೆ ಬೋಧಿಸಲು ಅರ್ಹರು : ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ

ಅಗತ್ಯ ವಿಷಯಗಳಲ್ಲಿ ಪದವಿ ಹೊಂದಿದ ಶಿಕ್ಷಕರು 6, 7ನೇ ತರಗತಿಗೆ ಬೋಧಿಸಲು ಅರ್ಹರು : ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ

ಬೆಂಗಳೂರು : ಅಗತ್ಯ ವಿಷಯಗಳಲ್ಲಿ ಪದವಿ ಹೊಂದಿದ ಶಿಕ್ಷಕರು 6, 7ನೇ ತರಗತಿಗೆ ಬೋಧಿಸಲು ಅರ್ಹರು ಎಂದು ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2025ನ್ನು ಕರ್ನಾಟಕ ನಾಗರಿಕ ಸೇವೆಗಳು ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ 14)ರ ಕಲಂ-3 ರ ಉಪ ಕಲಂ (2) ರ ಖಂಡ (ಎ) ರಲ್ಲಿ ಅಗತ್ಯಪಡಿಸಿರುವಂತೆ ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯ ಭಾಗ-IVA (ಸಂಖ್ಯೆ: 659) ರಲ್ಲಿ ಪ್ರಕಟಿಸಿ ಅದರಿಂದ ಬಾಧಿತರಾಗಲು ಸಂಭವವಿರುವ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಿ ಪ್ರಕಟಿಸಲಾಗಿದೆ.

ಸದರಿ ವಿಶೇಷ ರಾಜ್ಯಪತ್ರವನ್ನು ದಿನಾಂಕ: 17.10.2025 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಿರುವುದರಿಂದ;ಮತ್ತು ಸದರಿ ಕರಡು ತಿದ್ದುಪಡಿ ನಿಯಮಗಳ ಬಗ್ಗೆ ಸಾರ್ವಜನಿಕರಿಂದ ಸ್ವೀಕೃತವಾಗಿರುವ ಆಕ್ಷೇಪಣೆ ಮತ್ತು ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಗಣಿಸಿದೆ. ಈಗ ಕರ್ನಾಟಕ ನಾಗರಿಕ ಸೇವೆಗಳು ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ 14) ರ 8ನೇ ಪ್ರಕರಣದೊಂದಿಗೆ ಓದಿಕೊಂಡು 3ನೇ ಪ್ರಕರಣದ (1)ನೇ ಉಪ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಮೂಲಕ ಈ ಕೆಳಕಂಡಂತೆ ನಿಯಮಗಳನ್ನು ರಚಿಸುತ್ತದೆ.

Category
ಕರಾವಳಿ ತರಂಗಿಣಿ