ಬೆಂಗಳೂರು : ರಾಜ್ಯಾದ್ಯಂತ ತಾಪಾಮಾನ ಭಾರೀ ಕುಸಿತವಾಗಿದ್ದು, ಚಳಿಗೆ ಜನರು ತತ್ತರಿಸಿದ್ದಾರೆ. ಈ ನಡುವೆ ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಶೀತಗಾಳಿ ಮುನ್ಸೂಚನೆ ನೀಡಲಾಗಿದೆ. ಧಾರವಾಡ ಜಿಲ್ಲೆ ಸೇರಿದಂತೆ ಗದಗ, ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಯಾದಗಿರಿ, ಬೆಳಗಾವಿ ಜಿಲ್ಲೆಯಲ್ಲಿ ಮುಂದಿನ 3 ದಿನಗಳಲ್ಲಿ ಭಾರೀ ಶೀತಗಾಳಿಯೊಂದಿಗೆ ಮೈ ಕೊರೆಯುವ ಚಳಿ ಇರಲಿದೆ. ಇದು ಮಾನವರು ಹಾಗೂ ಬೆಳೆಗಳ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ 3 ದಿನಗಳಲ್ಲಿ ಇನ್ನೂ ಹೆಚ್ಚಿನ ಚಳಿ ಹಾಗೂ ಶೀತಗಾಳಿ ಇರಲಿದೆ. ಇದು ವಯಸ್ಸಾದವರ ಮೇಲೆ ತೀವ್ರ ಪರಿಣಾಮ ಬೀರಲಿದೆ. ಇದರ ಜೊತೆಗೆ ಬೆಳೆ ವೈಪರಿತ್ಯವೂ ಉಂಟಾಗಲಿದೆ ಎಂದ ಹವಾಮಾನ ಇಲಾಖೆ ತಿಳಿಸಿದೆ. ಈ ಶೀತಗಾಳಿಯಿಂದ ಮನುಷ್ಯರು ತಮ್ಮನ್ನು ರಕ್ಷಿಸಿಕೊಳ್ಳಬೇಕು. ಬೆಚ್ಚಗಿನ ನೀರು, ಆಹಾರವನ್ನೇ ಸೇವಿಸಬೇಕು ತಜ್ಞರು ಸೂಚನೆಗಳನ್ನು ನೀಡಿದ್ದಾರೆ.