ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ. ಯಾರು ಶಿವಾಜಿ ಮಹಾರಾಜರನ್ನು ಮುಸ್ಲಿಂ ವಿರೋಧಿ ಅಂತ ಹೇಳಬಾರದು. ಇಲ್ಲಿ ಯಾರೂ ಇತಿಹಾಸದ ಬಗ್ಗೆ ಸುಳ್ಳು ಹೇಳಬಾರದು. ನಾನು ಮರಾಠ ಸಮುದಾಯದವನೇ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಜಿಲ್ಲೆಯ ಅಥಣಿಯಲ್ಲಿ ನಡೆದ ಶಿವಾಜಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸಂತೋಷ ಲಾಡ್, ಎಲ್ಲರೂ ಮರಾಠರ ಬಗ್ಗೆ ಮಾತನಾಡುತ್ತಾರೆ. ಆದರೆ ಯಾರೂ ಗ್ರಾಮ ಪಂಚಾಯಿತಿಯಿಂದ ಹಿಡಿದು ಬೇರೆ ಸ್ಥಾನಕ್ಕೆ ಟಿಕೆಟ್ ಕೊಡಿವುದಿಲ್ಲ ಎಂದಿದ್ದಾರೆ. ಶಿವಾಜಿ ಮಹಾರಾಜರನ್ನು ಮುಸ್ಲಿಂ ವಿರೋಧಿ ಅಂತ ಯಾರು ಹೇಳಬಾರದು ಎಂದ ಸಚಿವ ಸಂತೋಷ್ ಲಾಡ್ಗೆ ಶಿವಾಜಿ ಸಹೋದರ ಸಂಭಾಜಿ ಮಹಾರಾಜರ ಮೇಲೆ ಮುಸ್ಲಿಂ ಸುಲ್ತಾನರು ನಡೆಸಿದ್ದ ದೌರ್ಜನ್ಯದ ವೇದಿಕೆ ಮೇಲೆ ಶಾಸಕ ಯತ್ನಾಳ್ ವಿವರಿಸಿದರು. ಈ ಇತಿಹಾಸ ಸುಳ್ಳು ಎಂದು ವಾದಿಸಿ ಸಚಿವ ಸಂತೋಷ್ ಲಾಡ್ ತಮ್ಮ ಭಾಷಣ ಮಾಡಿದರು.