image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕೇಂದ್ರದಿಂದ ಇಡಿ ಸಂಸ್ಥೆ ದುರ್ಬಳಕೆ: ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕೇಂದ್ರದಿಂದ ಇಡಿ ಸಂಸ್ಥೆ ದುರ್ಬಳಕೆ: ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬೆಳಗಾವಿ: ನ್ಯಾಷನಲ್ ಹೆರಾಲ್ಡ್ (ಯಂಗ್ ಇಂಡಿಯ) ಪ್ರಕರಣದಲ್ಲಿ ಯಾವುದೇ ಎಫ್.ಐ.ಆರ್., ಪ್ರಕರಣಗಳು ಇಲ್ಲದೇ ದುರುದ್ದೇಶಪೂರಕವಾಗಿ ಇಡಿ ಸಂಸ್ಥೆಯನ್ನು ಬಳಸಿಕೊಂಡು ಕೇಂದ್ರದ ಬಿಜೆಪಿ ನಾಯಕರು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವ್ಯಕ್ತಿತ್ವ ತೇಜೋವಧೆ ಮಾಡುತ್ತಿರುವ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬೆಳಗಾವಿಯ ಸುವರ್ಣ ಸೌಧದ ಗಾಂಧಿ ಪ್ರತಿಮೆಯ ಮುಂದೆ ನಿನ್ನೆ ಬೃಹತ್ ಪ್ರತಿಭಟನೆ ನಡೆಯಿತು.ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ರಾಜ್ಯಾಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರೊಂದಿಗೆ ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ಶಾಸಕರಾದ ಮಂಜುನಾಥ ಭಂಡಾರಿ ಅವರು ಪಾಲ್ಗೊಂಡರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಸಚಿವರು,  ಶಾಸಕರು ಹಾಗೂ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ