ಮುಂಬೈ : ಬಾಲಿವುಡ್ ನಟ ಸೈಫ್ ಅಲಿ ಖಾನ್ ರ ಬಾಂದ್ರಾ ದಲ್ಲಿರುವ ಅವರ ನಿವಾಸಕ್ಕೆ ದರೋಡೆಕೋರನೊಬ್ಬ ನುಗ್ಗಿ ಚಾಕುವಿನಿಂದ ಇರಿದ ಪರಿಣಾಮ ಗಾಯಗೊಂಡಿರುವ. ಘಟನೆ ನಡೆದಿದೆ. ಗುರುವಾರ ಬೆಳಗಿನ ಜಾವ 2:30 ರ ಸುಮಾರಿಗೆ ನಟ ತಮ್ಮ ಇತರ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಮಲಗಿದ್ದಾಗ ಈ ಘಟನೆ ಸಂಭವಿಸಿದೆ.
ಮನೆಯಲ್ಲಿದ್ದವರು ಎಚ್ಚರಗೊಂಡು ದರೋಡೆಕೋರನನ್ನು ಹಿಡಿಯಲು ಪ್ರಯತ್ನಿಸುತ್ತಿದ್ದು, ಅವನು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಂದ್ರಾ ಪೊಲೀಸರು ಪ್ರಕರಣ ದಾಖಲಾಗಿದ್ದು, ಅಪರಾಧಿಯನ್ನು ಹಿಡಿಯಲು ಹಲವಾರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿದುಬಂದಿದೆ.ಸೈಫ್ ಅಲಿ ಖಾನ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪರೇಷನ್ ಮಾಡಿ ದೇಹದಲ್ಲಿದ್ದ ಚಾಕುವಿನ ಚೂರನ್ನು ಹೊರತೆಗೆಯಲಾಗಿದೆ ಎಂದು ಮಾಹಿತಿ ತಿಳಿದುಬಂದಿದೆ.