ಕನ್ನಡ ಸೈಕಲಾಜಿಕಲ್ ಥ್ರಿಲ್ಲರ್ ಗ್ರೀನ್ ಸಿನಿಮಾ ಒಟಿಟಿ ಎಂಟ್ರಿಗೆ ಸಜ್ಜಾಗಿದೆ. ನಾಳೆಯಿಂದ zee5 ಒಟಿಟಿಯಲ್ಲಿ ಈ ಚಿತ್ರ ಸ್ಟ್ರೀಮಿಂಗ್ ಆಗಲಿದೆ.
ರಾಜ್ ವಿಜಯ್ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರದಲ್ಲಿ ವಿಭಿನ್ನ ಕಥಾಹಂದರವಿದೆ. ಇದು ಥ್ರಿಲ್ಲರ್ ಚಿತ್ರವಾಗಿದ್ದು, ಪ್ರೇಕ್ಷಕರ ಮನಸ್ಸಿನ ಆಳಕ್ಕೆ ಕರೆದೊಯ್ಯುತ್ತದೆ. ತನ್ನ ಇಡೀ ಬದುಕನ್ನೇ ನಿಯಂತಣ ಮಾಡುವ ತನ್ನೊಳಗಿನ ರಾಕ್ಷಸನಿಂದ ಹೊರಬರಲು ಪ್ರಯತ್ನಿಸುವ ನಾಯಕನ ಕಥೆಯೇ ಗ್ರೀನ್.
'ಗ್ರೀನ್’ ಸಿನಿಮಾದಲ್ಲಿ ಗೋಪಾಲಕೃಷ್ಣ ದೇಶಪಾಂಡೆ, ಬಾಲಾಜಿ ಮನೋಹರ್, ಡಿಂಪಿ ಫಾಧ್ಯಾ, ಆರ್ ಜೆ ವಿಕ್ಕಿ ಮತ್ತು ಶಿವ ಮಂಜು ಮುಂತಾದವರು ನಟಿಸಿದ್ದಾರೆ.ಚಿತ್ರಕ್ಕೆ ಕೆ. ಮಧುಸೂದನ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಶಕ್ತಿ ಸ್ಯಾಕ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ರಾಜ್ ವಿಜಯ್ ಹಾಗೂ ಬಿ.ಎನ್. ಸ್ವಾಮಿ ನಿರ್ಮಾಣ ಮಾಡಿದ್ದಾರೆ.