ಮಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆ-3 ಜುಲೈ 5 ರಿಂದ ಜುಲೈ 12 ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕಿನ 4 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಅಹಿತಕರ ಘಟನೆಗಳನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.