image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬೀದಿನಾಟಕ, ಜಾನಪದ ಸಂಗೀತ: ಕಲಾ ತಂಡಗಳಿಂದ ಅರ್ಜಿ ಆಹ್ವಾನ

ಬೀದಿನಾಟಕ, ಜಾನಪದ ಸಂಗೀತ: ಕಲಾ ತಂಡಗಳಿಂದ ಅರ್ಜಿ ಆಹ್ವಾನ

ಮಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಯೋಜನೆಗಳು, ಸಾಧನೆಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಉದ್ದೇಶಿಸಲಾಗಿದ್ದು, ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

  ಅರ್ಜಿ ಸಲ್ಲಿಸಲು ಆಗಸ್ಟ್ 5  ಕೊನೆಯ ದಿನ. ದಕ್ಷಿಣ ಕನ್ನಡ  ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಪ್ರತಿ ಬೀದಿನಾಟಕ ತಂಡದಲ್ಲಿ 8 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು. ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ 3 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು.  ಈ ಹಿಂದೆ ವಿವಿಧ ಇಲಾಖೆಗಳ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿರುವ ಅನುಭವ ಹೊಂದಿರಬೇಕು. ಬೀದಿನಾಟಕ ತಂಡವು ನೊಂದಾಯಿತ ತಂಡವಾಗಿರಬೇಕು.
ನಿಗದಿತ ಅರ್ಜಿ ನಮೂನೆಯನ್ನು  ಮಂಗಳೂರು ನೆಹರು ಮೈದಾನದ ಎದುರಿನ ಪಿಡಬ್ಲ್ಯೂಡಿ ಕಟ್ಟಡದ 2 ನೇ ಮಹಡಿಯಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ  ಕಚೇರಿಯಿಂದ ಪಡೆದು, ದಾಖಲಾತಿಗಳನ್ನು ಲಗತ್ತಿಸಿ  ಸಲ್ಲಿಸಬೇಕು ಎಂದು ಇಲಾಖೆಯ  ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ