ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕು ಅಗ್ನಿಶಾಮಕ ಠಾಣೆಯ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಜುಲೈ 9 ರಂದು ಬೆಳಿಗ್ಗೆ 10 ಗಂಟೆಗೆ ಉಳ್ಳಾಲ ತಾಲೂಕಿನ ಪಜೀರು ಕೈರಂಗಳದಲ್ಲಿ ನಡೆಯಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಗೌರವ ಉಪಸ್ಥಿತಿಯಲ್ಲಿ, ಗೃಹ ಸಚಿವ ಡಾ.ಜಿ ಪರಮೇಶ್ವರ ಕಟ್ಟಡದ ಶಂಕುಸ್ಥಾಪನೆ ಮಾಡಲಿದ್ದಾರೆ. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಅಧ್ಯಕ್ಷತೆ ವಹಿಸಲಿದ್ದಾರೆ.