image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳದಲ್ಲಿ ನೂರಕ್ಕೂ ಅಧಿಕ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದ ವ್ಯಕ್ತಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

ಧರ್ಮಸ್ಥಳದಲ್ಲಿ ನೂರಕ್ಕೂ ಅಧಿಕ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದ ವ್ಯಕ್ತಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಕ್ಕೂ ಅಧಿಕ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದ ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4 ರಂದು ವಕೀಲರ ಮೂಲಕ ದೂರು ನೀಡಿದ್ದ ಈ ವ್ಯಕ್ತಿ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಅವರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸುಮಾರು 1 ಗಂಟೆ 20 ನಿಮಿಷ ಆತ ಹೇಳಿಕೆ ನೀಡಿದ್ದಾನೆ ಎಂದು ತಿಳಿದುಬಂದಿದೆ. ಹೇಳಿಕೆ ನೀಡಲು ಬಂದ ವ್ಯಕ್ತಿಯನ್ನು ನ್ಯಾಯಾಲಯದಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆತರಲಾಗಿದ್ದು ಠಾಣೆಯಲ್ಲಿ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ. ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಎಫ್‌ಎಸ್‌ಎಲ್‌ ಅಧಿಕಾರಿಗಳ ತಂಡ ಆಗಮಿಸಿದ್ದು, ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Category
ಕರಾವಳಿ ತರಂಗಿಣಿ