image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪಿಲಿಕುಳದಲ್ಲಿ ಜುಲೈ 27 ರಂದು 'ಮತ್ಯೋತ್ಸವ'

ಪಿಲಿಕುಳದಲ್ಲಿ ಜುಲೈ 27 ರಂದು 'ಮತ್ಯೋತ್ಸವ'

ಮಂಗಳೂರು: ಕರ್ನಾಟಕ ಸರ್ಕಾರದ ಮೀನುಗಾರಿಕಾ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಮತ್ಯೋತ್ಸವ ಕಾರ್ಯಕ್ರಮವನ್ನು ಜುಲೈ  27 ರಂದು   ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಲೇಕ್ ಗಾರ್ಡನ್‍ನಲ್ಲಿ  ಆಯೋಜಿಸಲಾಗಿದೆ.

ಈ ಸಂದರ್ಭದಲ್ಲಿ, ಪಿಲಿಕುಳ ಕೆರೆಯಲ್ಲಿ ಬೆಳೆಸಿರುವ ಮೀನುಗಳನ್ನು ಹಿಡಿದು ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತದೆ. ಜೊತೆಗೆ, ಮೀನುಗಾರಿಕಾ ಇಲಾಖೆಯ ವತಿಯಿಂದ ಸಮುದ್ರದಿಂದ ತಾಜಾ ಮೀನುಗಳು ಮತ್ತು ಮೀನಿನಿಂದ ತಯಾರಿಸಿದ ಖಾದ್ಯಗಳ ಮಾರಾಟ ವ್ಯವಸ್ಥೆಯನ್ನು ಕೆರೆಯ ದಂಡೆಯಲ್ಲಿ ಮಾಡಲಾಗಿದೆ. ಮೀನುಗಾರಿಕಾ ಇಲಾಖೆಯ ವತಿಯಿಂದ ಮೀನು ಮರಿಗಳನ್ನು ಪಿಲಿಕುಳದ ಕೆರೆಗೆ ಬಿಡುವ ಕಾರ್ಯಕ್ರಮವೂ ನಡೆಲಿದೆ. ಮೀನು ಮಾರಾಟ ಪ್ರಕ್ರಿಯೆ ಬೆಳಿಗ್ಗೆ 8.30 ಗಂಟೆಯಿಂದ ಪ್ರಾರಂಭವಾಗುತ್ತದೆ ಮತ್ತು ಮೀನು ಲಭ್ಯವಿರುವ ತನಕ ಮುಂದುವರಿಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Category
ಕರಾವಳಿ ತರಂಗಿಣಿ