image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಆಹ್ವಾನ

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಆಹ್ವಾನ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿಗಾಗಿ ಒಂದನೇ ತರಗತಿಯಿಂದ ಅಂತಿಮ ಪದವಿ/ಡಿಪೆÇ್ಲೀಮಾ ಮತ್ತು ವೃತ್ತಿಪರ ಪದವಿಯವರೆಗೆ ಕರ್ನಾಟಕದಲ್ಲಿರುವ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ವಿಧ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
 ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ಡಿಪ್ಲೊಮಾ ವರೆಗೆ ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲು  ಅಕ್ಟೋಬರ್ 15 ಕೊನೆಯ ದಿನ. ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನ.
 ಹೆಚ್ಚಿನ ಮಾಹಿತಿಗೆ ಮತ್ತು ಅರ್ಜಿಗಾಗಿ ಮಂಗಳೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಾರ್ಯಾಲಯ  ಸಂಪರ್ಕಿಸಬಹುದು  ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ