image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಉತ್ತಮ ಶಿಕ್ಷ ಣ, ಉದ್ಯೋಗ ಹೊಂದಿರುವ ಜನರೇ ದೇಶದ ಸಂಪತ್ತು: ದಿನೇಶ್ ಗುಂಡೂರಾವ್

ಉತ್ತಮ ಶಿಕ್ಷ ಣ, ಉದ್ಯೋಗ ಹೊಂದಿರುವ ಜನರೇ ದೇಶದ ಸಂಪತ್ತು: ದಿನೇಶ್ ಗುಂಡೂರಾವ್

ಮಂಗಳೂರು: ಉತ್ತಮ ಶಿಕ್ಷಣ, ಉದ್ಯೋಗ ಹೊಂದಿರುವ ಜನರೇ ದೇಶದ ಸಂಪತ್ತು. ಶಿಕ್ಷಣ ವ್ಯಕ್ತಿಯ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಮಕ್ಕಳು ಉತ್ತ ವಿದ್ಯಾಭ್ಯಾಸ ಮಾಡಿ ಒಳ್ಳೆಯ ಕೆಲಸ ಹಿಡಿಯಬೇಕು. ಕೆಲಸ ಇಲ್ಲ ಎಂದರೆ ಇನ್ನೊಬ್ಬರಿಗೆ ಭಾರವಾದಂತೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಅವರು  ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡ 15 ನೇ ಆವೃತ್ತಿಯ ಉದ್ಯೋಗ ಮೇಳ 'ಆಳ್ವಾಸ್‌ ಪ್ರಗತಿ'ಗೆ ಚಾಲನೆ ನೀಡಿ ಮಾತನಾಡಿದರು.  ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಪಿ. ಎಲ್.ಧರ್ಮ "ಕಂಪೆನಿಗಳು ವಿದ್ಯಾರ್ಥಿಗಳಿಗೆ ಅವರ ಸಾಮರ್ಥ್ಯ ವನ್ನು ಗುರುತಿಸಿ  ಉದ್ಯೋಗ ನೀಡುವಂತಾಗಬೇಕು ಅಂತಹ ಸಾಮರ್ಥ್ಯ ವಿದ್ಯಾರ್ಥಿಗಳು ಹೊಂದು ವಂತಾಗಬೇಕು" ಎಂದರು.

ಶಾಸಕರಾದ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿ ಮಾತನಾಡಿ,  ಉದ್ಯೋಗ ಮೇಳ ವಿದ್ಯಾರ್ಥಿ ಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ವಹಿಸುತ್ತದೆ.ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ ನೀಡಿದರು.

ವಿಧಾನ ಪರಿಷತ್‌ ಸದಸ್ಯ ಭೋಜೇ ಗೌಡ, ಮಾಜಿ ಸಚಿವ ರಮಾನಾಥ ರೈ,ಅಭಯ ಚಂದ್ರ ಜೈನ್,ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್,ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಕಿಶೋ‌ರ್ ಆಳ್ವ, ಉದ್ಯಮಿ ಶ್ರೀಪತಿ ಭಟ್ ಮೊದಲಾದ ವರು ಉಪಸ್ಥಿತರಿದ್ದರು. 

ಈ ಸಂದರ್ಭದಲ್ಲಿ ಸೌದಿ ಅರೇಬಿಯಾದ ಎಕ್ಸ್‌ಪರ್ಟೈಸ್‌ ಸಂಸ್ಥೆಯ ಉಪಾಧ್ಯಕ್ಷ ಕೆ.ಎಸ್.ಶೇಕ್ ಕರ್ನಿರೆ, ಬಿಗ್ ಬಾಗ್ಸ್ ಪ್ರೈ.ಲಿ ಸಂಸ್ಥೆಯ ಸಿಇಒ ರವೀಶ್ ಕಾಮತ್, ರೋಹನ್ ಕಾರ್ಪೋರೇಶನ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ರೋಹನ್ ಮೊಂತೆರೋ, ನಿವೀಯಸ್ ಸೊಲ್ಯುಷನ್ ಪ್ರೈ.ಲಿಮಿಟೆಡ್ ನ ಸಿಇಒ ಸುಯೋಗ್‌ ಶೆಟ್ಟಿ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಆಳ್ವಾಸ್‌ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ್‌ ಆಳ್ವ ಸ್ವಾಗತಿಸಿದರು. ವೇಣುಗೋಪಾಲ್ ಕಾರ್ಯಕ್ರಮ ನಿರೂಪಿಸಿದರು.

Category
ಕರಾವಳಿ ತರಂಗಿಣಿ