ಮಂಗಳೂರು: ಮಂಗಳೂರಿನ ಭರತನಾಟ್ಯ ಕಲಾವಿದೆಯಾದ ರೆಮೋನಾ ಎವೆಟ್ ಪಿರೇರಾ ಅವರು 7 ದಿನಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ಹಿನ್ನೆಲೆಯಲ್ಲಿ, ರೋಹನ್ ಕಾರ್ಪೋರೇಶನ್ ಸಂಸ್ಥೆ ಅವರ ಸಾಧನೆಯನ್ನು ಗುರುತಿಸಿ ಶುಕ್ರವಾರ ವಿಶೇಷವಾಗಿ ಸನ್ಮಾನಿಸಿದೆ.
ಈ ಸನ್ಮಾನ ಕಾರ್ಯಕ್ರಮವು ಮಂಗಳೂರಿನ ಬಿಜೈ ಮುಖ್ಯ ರಸ್ತೆಯ ರೋಹನ್ ಸಿಟಿಯಲ್ಲಿರುವ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸ್ಥಾಪಕರಾದ ಡಾ.ರೋಹನ್ ಮೊಂತೇರೊರವರು "ರೆಮೋನಾ ಪಿರೇರಾ" ಅವರಿಗೆ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು.
ನಂತರ ಮಾತನಾಡಿದ ಅವರು, ಸ್ಥಳೀಯ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಹಾಗೂ ಮಂಗಳೂರಿನ ಕಲೆ, ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಬೆಳಕಿಗೆ ತರುವ ಉದ್ದೇಶದಿಂದ ಈ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.“ರೆಮೋನಾ ಅವರ ಸಾಧನೆ ಮಂಗಳೂರು ಮಾತ್ರವಲ್ಲ, ಇಡೀ ದೇಶಕ್ಕೆ ಹೆಮ್ಮೆ ತಂದಿದೆ. ಇವರು ಇಂದಿನ ಯುವ ಸಮುದಾಯಕ್ಕೆ ಸ್ಪೂರ್ತಿ” ಅದ್ವಿತೀಯ ಸಾಧನೆಗಾಗಿ ಸಂಸ್ಥೆಯ ವತಿಯಿಂದ ಭವಿಷ್ಯದಲ್ಲಿ ಇಂತಹ ಪ್ರತಿಭೆಗಳಿಗೆ ವೇದಿಕೆ ನೀಡಲಾಗುವುದು ಎಂದು ಈ ಸಂದರ್ಭದಲ್ಲಿ ಹೇಳಿದರು.ಇಡೀ ದೇಶಕ್ಕೆ ಹೆಮ್ಮೆ ತಂದಿದೆ. ಇವರು ಇಂದಿನ ಯುವ ಸಮುದಾಯಕ್ಕೆ ಸ್ಪೂರ್ತಿ” ಅದ್ವಿತೀಯ ಸಾಧನೆಗಾಗಿ ಸಂಸ್ಥೆಯ ವತಿಯಿಂದ ಭವಿಷ್ಯದಲ್ಲಿ ಇಂತಹ ಪ್ರತಿಭೆಗಳಿಗೆ ವೇದಿಕೆ ನೀಡಲಾಗುವುದು ಎಂದು ಈ ಸಂದರ್ಭದಲ್ಲಿ ಹೇಳಿದರು.