ಮಂಗಳೂರು: ದಕ್ಷಿಣಕನ್ನಡ ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಯಲ್ಲಿ ಅಗಸ್ಟ್ 30ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೀನುಗಾರರಿಗೂ ಸಮುದ್ರಕ್ಕೀಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ಸಮುದ್ರದಲ್ಲಿ ಗಾಳಿ ಅಬ್ಬರ 40 ರಿಂದ 60 kmph ಇರಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.