ಮಂಗಳೂರು : ಬಿಡುವಿಲ್ಲದೆ ನಿರಂತರ ಸುರಿದ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ತೋಟಗಳಿಗೆ ಕೊಳೆ ರೋಗ ಹರಡಿದೆ. ಇದರಿಂದ ಶೇಕಡಾ 50 ಕ್ಕಿಂತ ಹೆಚ್ಚು ಬೆಳೆ ನಾಶವಾಗಿದ್ದು ಕೃಷಿಕರ ಆದಾಯಕ್ಕೆ ಬರೆ ಬಿದ್ದಂತಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ. ಮೂಲತ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕತೆಯು ಕೃಷಿ ಆಧಾರಿತವಾಗಿದ್ದು ಇಲ್ಲಿನ ಕೃಷಿಕರು ಹೆಚ್ಚಾಗಿ ಅಡಿಕೆ ಬೆಳೆಯನ್ನು ತಮ್ಮ ಜೀವನಾಧಾರವಾಗಿಸಿಕೊಂಡಿದ್ದಾರೆ