image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಉಡುಪಿಯ ರಾಷ್ಟ್ರೀಯ ಹೆದ್ದಾರಿ '169 ಎ'ಯ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಉದ್ಘಾಟಿಸಿದ ವಿ. ಸೋಮಣ್ಣ

ಉಡುಪಿಯ ರಾಷ್ಟ್ರೀಯ ಹೆದ್ದಾರಿ '169 ಎ'ಯ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಉದ್ಘಾಟಿಸಿದ ವಿ. ಸೋಮಣ್ಣ

ಉಡುಪಿ: ಉಡುಪಿಯ ರಾಷ್ಟ್ರೀಯ ಹೆದ್ದಾರಿ '169 ಎ'ಯ ಇಂದ್ರಾಳಿ ರೈಲ್ವೆ ಮೇಲ್ಸೇತುವೆಯನ್ನು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಭಾನುವಾರ ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಯಾವುದೇ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಸೂಚನೆ ನೀಡಿದ್ದಾರೆ ಎಂದರು. ರೈಲ್ವೆ ಇಲಾಖೆಯ ಕಾಮಗಾರಿಗಳು ಸೇರಿದಂತೆ ವಿವಿಧ ಕಾಮಗಾರಿಗಳಿಂದಾಗಿ ಇಂದು ಕರಾವಳಿ ಭಾಗದಲ್ಲಿ ಪ್ರಗತಿಯಾಗುತ್ತಿದೆ ಎಂದು ಹೇಳಿದರು. ರಾಜ್ಯದಲ್ಲಿ 6 ಸಾವಿರ ಕಿ.ಮೀ. ಇದ್ದ ರಾಷ್ಟ್ರೀಯ ಹೆದ್ದಾರಿ ಇಂದು 10 ಸಾವಿರ ಕಿ.ಮೀ. ಆಗಿ ವಿಸ್ತರಣೆಯಾಗಿದೆ ಎಂದು ತಿಳಿಸಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವಿ.ಸುನಿಲ್ ಕುಮಾರ್, ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ