image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಶ್ರೀಕ್ಷೇತ್ರ ಕುದ್ರೋಳಿಯಲ್ಲಿ 'ಮಂಗಳೂರು ದಸರಾ'ಕ್ಕೆ ವಿದ್ಯುಕ್ತ ಚಾಲನೆ

ಶ್ರೀಕ್ಷೇತ್ರ ಕುದ್ರೋಳಿಯಲ್ಲಿ 'ಮಂಗಳೂರು ದಸರಾ'ಕ್ಕೆ ವಿದ್ಯುಕ್ತ ಚಾಲನೆ

ಮಂಗಳೂರು: ನಗರದ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ "ಮಂಗಳೂರು ದಸರಾ"ಕ್ಕೆ ಇಂದು ವಿದ್ಯುಕ್ತ ಚಾಲನೆ ದೊರಕಿತು. 

ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ನಡೆಯುವ ಮಂಗಳೂರು ದಸರಾಕ್ಕೆ ಮಂಗಳೂರು ರಾಮಕೃಷ್ಣ ಮಿಶನ್‌ನ ಅಧ್ಯಕ್ಷ ಜಿತಕಾಮಾನಂದಜಿ ಮಹಾರಾಜ್, ಮಂಗಳೂರು ಬ್ರಹ್ಮಕುಮಾರೀಸ್ ಸಂಸ್ಥೆಯ ಮುಖ್ಯಸ್ಥೆ ಬಹ್ಮಕುಮಾರಿ ವಿಶ್ವೇಶ್ವರಿ ಜೀ ಚಾಲನೆ ನೀಡಿದರು.

ಭವ್ಯ ಕಲಾಮಂಟಪದಲ್ಲಿ ಶ್ರೀ ಮಹಾಗಣಪತಿ, ಶ್ರೀ ಶಾರದಾ ಮಾತೆ, ಆದಿಶಕ್ತಿ ಸಹಿತ ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ, ಮಹಾಕಾಳಿ, ಕಾತ್ಯಾಯಿನಿ, ಸ್ಕಂದಮಾತೆ, ಮಹಾಗೌರಿ, ಸಿದ್ದಿಧಾತ್ರಿಯರ ಮೂರ್ತಿಯನ್ನು ಏಕಕಾಲದಲ್ಲಿ ಪ್ರತಿಷ್ಠಾಪಿಸಲಾಯಿತು. ಅಸಂಖ್ಯಾತ ಭಕ್ತರು ದಸರಾ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಈ ಬಾರಿ ತದಿಗೆ ಉಪರಿ ಬಂದಿರುವ ಹಿನ್ನೆಲೆಯಲ್ಲಿ 11ದಿನಗಳ ಕಾಲ ದಸರಾ ಪೂಜೆ ಸಂಪನ್ನವಾಗಿ ಎಲ್ಲಾ ಮೂರ್ತಿಗಳನ್ನು ಅಕ್ಟೋಬ‌ರ್ 2ರಂದು ಸಂಜೆ ವಿಸರ್ಜನಾ ಪೂಜೆ ನಡೆದು ನಗರದಾದ್ಯಂತ ಮೆರವಣಿಗೆ ನಡೆಯಲಿದೆ. ಮರುದಿನ ಬೆಳಗ್ಗೆ ಎಲ್ಲಾ ಮೂರ್ತಿಗಳನ್ನು ದೇವಸ್ಥಾನದ ಕಲ್ಯಾಣಿಯಲ್ಲಿ ವಿಸರ್ಜಿಸಲಾಗುತ್ತದೆ.

Category
ಕರಾವಳಿ ತರಂಗಿಣಿ