image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಜಿಲ್ಲಾ ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಜಿಲ್ಲಾ ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮಂಗಳೂರು:  2025-26 ನೇ ಸಾಲಿನ "ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ನೀಡುವ ”ಜಿಲ್ಲಾ ಪ್ರಶಸ್ತಿ”ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಹಾಗೂ ಅನುಪಮ ಸೇವೆ ಸಾಧನೆಗೈದ ವ್ಯಕ್ತಿಗಳನ್ನು ಗುರುತಿಸಿ "ಜಿಲ್ಲಾ ಪ್ರಶಸ್ತಿ"ಯನ್ನು ನವೆಂಬರ್ 1 ರಂದು ಆಚರಿಸಲಾಗುವ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ನೀಡಿ ಗೌರವಿಸುವ ಪದ್ಧತಿ  ಜಿಲ್ಲಾಡಳಿತದಿಂದ ಇರುತ್ತದೆ.
      ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತಕಲೆಗಳು, ಸಮಾಜಸೇವೆ, ಜಾನಪದ, ಪರಿಸರ-ವಿಜ್ಞಾನ, ವೈದ್ಯಕೀಯ, ಸಂಶೋದನೆ, ಪತ್ರಿಕೋದ್ಯಮ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರು ಅರ್ಜಿಯನ್ನು ತಮ್ಮ ಸೇವೆ/ಸಾಧನೆಯ ಕ್ಷೇತ್ರ ಹಾಗೂ ಸಂಕ್ಷಿಪ್ತ ದಾಖಲೆ, ವಿವರಣೆಗಳೊಂದಿಗೆ ಅಕ್ಟೋಬರ್ 20 ರಂದು 5 ಗಂಟೆಯ ಒಳಗಾಗಿ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಲು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Category
ಕರಾವಳಿ ತರಂಗಿಣಿ