image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ಮಂಗಳೂರು: ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮವನ್ನು ಅಕ್ಟೋಬರ್ 10 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಅಡ್ಯಾರ್ ಗಾರ್ಡನ್ ಸಭಾಂಗಣದಲ್ಲಿ  ಆಯೋಜಿಸಲಾಗಿದೆ.
ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಫರೀದ್ ಇವರ ಘನ ಉಪಸ್ಥಿತಿಯಲ್ಲಿ,  ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಅವರು ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್‍ಗಳನ್ನು ವಿತರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಸಂಘಟಿತ ಕಾರ್ಮಿಕರು ಭಾಗವಹಿಸಿ, ಸ್ಮಾರ್ಟ್ ಕಾರ್ಡ್ ಪಡೆದುಕೊಂಡು ವಿವಿಧ ಯೋಜನೆಗಳ ಅರಿವು ಪಡೆದುಕೊಳ್ಳಬೇಕು ಎಂದು ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ