image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರನ್ನ ಹೊರದಬ್ಬಿದ ಪುತ್ತಿಲ ಪರಿವಾರದ ಕಾರ್ಯಕರ್ತರು

ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರನ್ನ ಹೊರದಬ್ಬಿದ ಪುತ್ತಿಲ ಪರಿವಾರದ ಕಾರ್ಯಕರ್ತರು

ಪುತ್ತೂರು : ಪುತ್ತೂರಿನಲ್ಲಿ ಬಿಜೆಪಿ ಮತ್ತು ಪುತ್ತಿಲ ಪರಿವಾರದ ಜಟಾಪಟಿ ಮುಂದುವರಿದಿದೆ. ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಪುತ್ತಿಲ ಪರಿವಾರದ ಕಾರ್ಯಕರ್ತರು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರನ್ನ ಹೊರದಬ್ಬಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪುತ್ತೂರಿನಲ್ಲಿ ನಡೆದ ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಅವರನ್ನ ಪುತ್ತಿಲ ಪರಿವಾರದ ಕಾರ್ಯಕರ್ತರು ತಡೆದಿದ್ದು, ಶ್ರೀನಿವಾಸ ಕಲ್ಯಾಣೋತ್ಸವದ ಸ್ಥಾಪಕಾಧ್ಯಕ್ಷರನ್ನೇ ಪುತ್ತಿಲ ಪರಿವಾರದ ಕಾರ್ಯಕರ್ತರು ಹೊರತತಳ್ಳಿದ್ದ್ದಾರೆ. ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣದ ಮೇರೆಗೆ ಕುಟುಂಬ ಸಮೇತ ಆಗಮಿಸಿದ್ದ ಪ್ರಸನ್ನ ಕುಮಾರ್ ಮಾರ್ತ ಅವರನ್ನು ಪುತ್ತಿಲ ಪರಿವಾರದ ಕಾರ್ಯಕರ್ತರು ಅವಮಾನಿಸಿದ್ದಾರೆ. ಈ ಹಿನ್ನೆಲೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ನಡೆಯಲ್ಲಿ ಬಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಕಣ್ಣೀರು ಹಾಕಿದ್ದಾರೆ. 

 ಮಾಧ್ಯಮಕ್ಕೆ ಹೇಳಿಕೆ ನೀಡಿದ ಪ್ರಸನ್ನ ಕುಮಾರ್ ಮಾರ್ತ, ಪುತ್ತಿಲ ಪರಿವಾರದಲ್ಲಿರುವಾಗಲೂ ನಾನು ಸಮಸ್ತ ಹಿಂದೂಗಳಿಗಾಗಿ ಕೆಲಸ ಮಾಡಿದ್ದೇನೆ. ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷ ಸ್ಥಾನ ನೀಡಿದ ಮೇಲೂ ಹಿಂದೂ ಸಮಾಜವನ್ನು ಒಟ್ಟು ಗೂಡಿಸುವ ಪ್ರಯತ್ನ ಮಾಡಿದ್ದೇನೆ. ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ನನ್ನ ಮನೆಗೆ ಬಂದು ನನ್ನನ್ನ ಆಹ್ವಾನಿಸಿದ್ದರು, ಶ್ರೀನಿವಾಸ ಕಲ್ಯಾಣೋತ್ಸವದ ಪ್ರತಿಯೊಂದು ಕಾರ್ಯಕ್ರಮದಲ್ಲೂ ನಾನು ಸಕ್ರೀಯವಾಗಿ ಭಾಗವಹಿಸಿದ್ದೇನೆ. ಆದ್ರೆ ಇತ್ತೀಚೆಗೆ ನಡೆದ ರಾಜಕೀಯ ವಿದ್ಯಾಮಾನದ ಬಳಿಕ ನನ್ನನ್ನ ಬಿಜೆಪಿಗೆ ರಾಜೀನಾಮೆ ನೀಡ್ಬೇಕು ಎಂದು ಪುತ್ತಿಲ ಪರಿವಾರದವರು ಒತ್ತಡ ಹಾಕುತ್ತ ಇದ್ದಾರೆ. ಆದರೂ ನನ್ನನ್ನ ಪುತ್ತಿಲ ಪರಿವಾರದ ಪ್ರಮುಖರು ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಭಾಗವಹಿಸುವಂತೆ ಕೇಳಿಕೊಂಡಿದ್ದರು. ಅದರಂತೆ ನಾನು ಕುಟುಂಬ ಸಮೇತ ಹೋಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಆದರೆ ನಾನು ಕಾರ್ಯಕ್ರಮಕ್ಕೆ ಹೋಗಿದ್ದ ವೇಳೆ ಕಾರ್ಯಕ್ರಮ ಗೇಟ್ ಬಳಿಯಲ್ಲಿಂದಲೇ ಹೊರದಬ್ಬುವ ಕೆಲಸ ಮಾಡಿದ್ದಾರೆ. ಈ ವಿದ್ಯಾಮಾನದಿಂದ ಮನನೊಂದ ನನ್ನ ಪತ್ನಿ ಕಣ್ಣಿರು ಹಾಕಿದ್ದಾಳೆ.vಪುತ್ತಿಲ ಪರಿವಾರದ ಕಾರ್ಯಕರ್ತರ ನಡೆಯಿಂದ ತುಂಬಾ ಬೇಸರವಾಗಿದೆ. ನನಗೆ ಮಾಡಿದ ಅವಮಾನ ದೇವರಿಗೆ ಗೊತ್ತಿದೆ. ನನಗೆ ಅವಮಾನ ಮಾಡಿದಂತ ವ್ಯಕ್ತಿ ಸಂಸಾರಸ್ಥರಾಗಿರುವ ಕಾರಣ ಶಿಕ್ಷೆ ಬೇಡ, ಬದಲಿಗೆ ಬುದ್ಧಿಕೊಡಿ ಎಂದು ದೇವರಲ್ಲಿ ಕೇಳಿಕೊಂಡಿದ್ದೇನೆ ಎಂದರು.

Category
ಕರಾವಳಿ ತರಂಗಿಣಿ