ಮಂಗಳೂರು:ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು. ಸಮಯವೇ ಉತ್ತರ ಕೊಡುತ್ತದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಮಂಗಳೂರಿನಲ್ಲಿ ನೀವು ಸಿಎಂ ಆಗಬೇಕು ಎಂಬ ಕನಸು ಜನರಿಗಿದೆ ಎಂದು ಕೇಳಿದಾಗ, ಪ್ರತಿಕ್ರಿಯೆ ನೀಡಿದ ಅವರು, ಕನಸು ಜನರಿಗೂ ಇದೆ, ಶಾಸಕರಿಗೂ ಇದೆ, ನಿಮಗೂ (ಮಾಧ್ಯಮ) ಇದೆ. ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು" ಎಂದು ತಿಳಿಸಿದರು.
ದಲಿತ ಸಂಘಟನೆಗಳು ಪರಮೇಶ್ವರ್ ಅವರು ಸಿಎಂ ಆಗಬೇಕು ಎಂದು ಆಸೆ ಪಟ್ಟಿರುವ ಬಗ್ಗೆ ಕೇಳಿದಾಗ, ಅವರವರ ಅಭಿಮಾನಿಗಳು ಆಸೆ ಪಡುತ್ತಾರೆ. ಅದನ್ನು ನಾನು ಬೇಡ ಎಂದು ಹೇಳಲು ಆಗುವುದಿಲ್ಲ. ರಾಜ್ಯ ಬಜೆಟ್ ಬಳಿಕ ಅಧಿಕಾರ ಹಂಚಿಕೆ ಆಗುವುದೇ ಎಂದು ಕೇಳಿದಾಗ, ಸಮಯವೇ ಉತ್ತರ ನೀಡಲಿದೆ ಎಂದು ಅಡ್ಡಗೋಡೆಯಲ್ಲಿ ದೀಪ ಇಟ್ಟಂತೆ ಮಾತನಾಡಿದರು.